ಜಿಲ್ಲಾ ಸುದ್ದಿಗಳು
ದೇವನಹಳ್ಳಿ:
ಭೌತಿಕವಾಗಿ ಸರಕಾರದ ಆದೇಶದಂತೆ ಶಾಲೆಗಳು ಆರಂಭವಾಗಿರುವ ಹಿನ್ನಲೆಯಲ್ಲಿ ಗ್ರಾಪಂ ಸಹಕಾರದಲ್ಲಿ ಪ್ರತಿ ವಿದ್ಯಾರ್ಥಿ ಮತ್ತು ಶಿಕ್ಷಕರ ಆರೋಗ್ಯ ಹಿತ ಕಾಪಾಡುವುದಕ್ಕೆ ಅಣ್ಣೇಶ್ವರ ಗ್ರಾಮ ಪಂಚಾಯಿತಿ ವತಿಯಿಂದ ಉಚಿತ ಸ್ಯಾನಿಟೈಸರ್ ಮತ್ತು ಮಾಸ್ಕ್ ವಿತರಣೆ ನಡೆಯಿತು.
ಅಣ್ಣೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ವೇಣುಗೋಪಾಲ್ ಮಾತನಾಡಿ, ಶಾಲೆಗಳು ಶುರುವಾಗಿದ್ದು, ೩ನೇ ಅಲೆ ಭೀತಿ ಮಕ್ಕಳಿಗೆ ಯಾವುದೇ ರೀತಿ ತೊಂದರೆಯಾಗಬಾರದೆಂದು ಪಂಚಾಯಿತಿಯಿಂದ ಅನುಕೂಲ ಕಲ್ಪಿಸಲಾಗಿದೆ. ಶಾಲೆಗಳಲ್ಲಿ ಮಕ್ಕಳಿಗೆ ಯಾವುದೇ ರೀತಿಯಲ್ಲಿ ಅನಾನುಕೂಲವಾಗದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೂ ಮಕ್ಕಳಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಲಾಗಿದ್ದು, ಶಾಲಾ ಮುಖ್ಯೋಪಾದ್ಯಯರಿಂದ ಬಂದಿರುವ ಪಟ್ಟಿಯ ಪ್ರಕಾರ ಗ್ರಾಮಪಂಚಾಯಿತಿಯಿಂದ ನೀಡುವ ಕಾರ್ಯ ಮಾಡಲಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ದೇವನಹಳ್ಳಿ ತಾಲೂಕಿನ ಬೈಚಾಪುರ ಸರಕಾರಿ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ನೀಡಲಾಯಿತು.
ನಂತರ ಬೈಚಾಪುರ ಶಾಲಾ ಮುಖ್ಯ ಶಿಕ್ಷಕಿ ಎಸ್.ಮುನಿಯಮ್ಮ ಮಾತನಾಡಿ, ಬೈಚಾಪುರ ಶಾಲೆಗೆ ಅಣ್ಣೇಶ್ವರ ಗ್ರಾಮ ಪಂಚಾಯಿತಿ ವತಿಯಿಂದ ಶಾಲೆ ಪ್ರಾರಂಭವಾಗುವ ಪೂರ್ವದಿಂದ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲಾ ಸರಕಾರಿ ಶಾಲೆಗಳ ಆವರಣ, ಕೊಠಡಿಗಳಿಗೆ ಪಂಚಾಯಿತಿಯಿಂದಲೇ ಸ್ಯಾನಿಟೈಸರ್ ಮಾಡಿಕೊಟ್ಟಿದ್ದಾರೆ. ಸ್ವಚ್ಛತಾ ಕಾರ್ಯವನ್ನು ಸಹ ಮಾಡಿದ್ದಾರೆ. ಎಲ್ಲಾ ಮಕ್ಕಳಿಗೂ ಎರಡೆರಡು ಮಾಸ್ಕ್ ಮತ್ತು ಸ್ಯಾನಿಟೈಸರ್ ಸ್ಟಾಂಡ್ ನೀಡಿದ್ದಾರೆ. ಹೀಗೆ ಶಾಲಾ ಮಕ್ಕಳ ಆರೋಗ್ಯದ ಹಿತ ಕಾಪಾಡಲು ಪಂಚಾಯಿತಿಯಿಂದ ಅನುಕೂಲ ಮಾಡಿಕೊಟ್ಟಿರುತ್ತಾರೆ ಎಂದರು.
ಈ ವೇಳೆಯಲ್ಲಿ ಅಣ್ಣೇಶ್ವರ ಗ್ರಾಪಂ ಉಪಾಧ್ಯಕ್ಷೆ ಜಯಮ್ಮ, ಪಿಡಿಒ ಕುಮಾರ್, ಸದಸ್ಯರು, ಸಿಬ್ಬಂದಿ ವರ್ಗ, ಬೈಚಾಪುರ ಸರಕಾರಿ ಶಾಲಾ ಶಿಕ್ಷಕವೃಂದ, ವಿದ್ಯಾರ್ಥಿಗಳು ಇದ್ದರು.
Be the first to comment