ಜಿಲ್ಲಾ ಸುದ್ದಿಗಳು
ಬಾಗಲಕೋಟೆ :ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲು ನಿರ್ಧರಿಸಲಾಗಿದ್ದು, ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನೀತರ ಕ್ಷೇತ್ರಗಳಲ್ಲಿ ಮಾಡಿರುವ ಸಾಧನೆಗಳ ಬಗ್ಗೆ ದಾಖಲೆಗಳನ್ನು ಲಗತ್ತಿಸಿ, ಪ್ರಸ್ತಾವನೆಗಳನ್ನು ಸೆಪ್ಟೆಂಬರ 18 ರೊಳಗಾಗಿ ಉಪನಿರ್ದೇಶಕ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬಾಗಲಕೋಟೆ ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಾ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment