ಕೋವಿಡ್ ಲಸಿಕಾ ಕೇಂದ್ರಕ್ಕೆ ಡಿಸಿ ರಾಜೇಂದ್ರ ಭೇಟಿ, ಪರಿಶೀಲನೆ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

17 ರಂದು ಬೃಹತ್ ಕೋವಿಡ್-19 ಲಸಿಕಾ ಮೇಳ

ಜಿಲ್ಲೆಯಾದ್ಯಂತ ಸೆಪ್ಟೆಂಬರ 17 ರಂದು ಬೃಹತ್ ಕೋವಿಡ್-19 ಲಸಿಕಾ ಮೇಳ ಹಮ್ಮಿಕೊಳ್ಳಲಾಗಿದ್ದು, ಅಂದು 75 ಸಾವಿರ ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಲಸಿಕಾಕರಣ ಪ್ರಗತಿಗಾಗಿ ಜಿಲ್ಲಾ, ತಾಲೂಕಾ ಮಟ್ಟದ ಅಧಿಕಾರಿಗಳು ಸೇರಿ ಒಟ್ಟು 69 ಜನರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಬಾದಾಮಿ ತಾಲೂಕಿಗೆ 12 ಜನ, ಬಾಗಲಕೋಟೆ ತಾಲೂಕಿಗೆ 10, ಬೀಳಗಿ ತಾಲೂಕಿಗೆ 4, ಹುನಗುಂದ ತಾಲೂಕಿಗೆ 17, ಜಮಖಂಡಿ ತಾಲೂಕಿಗೆ 14, ಮುಧೋಳ ತಾಲೂಕಿನಲ್ಲಿ 12 ಜನ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ ಆದೇಶಿಸಲಾಗಿದೆ.
ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾಧಿಕಾರಿಗಳು

ಬಾಗಲಕೋಟೆ : ಜಿಲ್ಲೆಯಾದ್ಯಂತ ಪ್ರತಿ ಬುಧವಾರದಂದು ಹಮ್ಮಿಕೊಳ್ಳಲಾದ ಕೋವಿಡ್ ಲಸಿಕಾ ಮೇಳ ಅಂಗವಾಗಿ ನವನಗರದ ವಿವಿಧ ಲಸಿಕಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಭೇಟಿ ನೀಡಿ ಲಸಿಕಾ ಪ್ರಗತಿಯನ್ನು ಪರಿಶೀಲಿಸಿದರು.

ನವನಗರದ ವಾಂಬೆ ಕಾಲೋನಿಯ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ನೀಡಬೇಕು. ಸಂಭವನೀಯ ಮೂರನೇ ಅಲೇ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಲಸಿಕೆ ನೀಡಲು ಪ್ರತಿ ಬುಧವಾರ ಕೋವಿಡ್ ಲಸಿಕಾ ಮೇಳ ಹಮ್ಮಿಕೊಳ್ಳಲಾಗುತ್ತಿದ್ದು, ಮೊದಲನೇ ಡೋಸ್ ಪಡೆದವರಿಗೆ ಎರಡನೇ ಡೋಸ್ ನೀಡಬೇಕು. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರು ಲಸಿಕೆ ಪಡೆದ ಬಗ್ಗೆ ಖಚಿತಪಡಿಸಿಕೊಳ್ಳಲು ಸೂಚಿಸಿದರು. ಭೇಟಿ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್. ದೇಸಾಯಿ, ನಗರಸಭೆ ಪೌರಾಯುಕ್ತ ಮುನಿಷಾಮಪ್ಪ ಇದ್ದರು.

Be the first to comment

Leave a Reply

Your email address will not be published.


*