ಜಿಲ್ಲಾ ಸುದ್ದಿಗಳು
ಬಾಗಲಕೋಟೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ, ಪ.ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿ ಪೋಷಕರ ವಾರ್ಷಿಕ ಆದಾಯ ಪ್ರವರ್ಗ-1, ಎಸ್‍ಸಿ, ಎಸ್‍ಟಿ ಅವರಿಗೆ 2.50 ಲಕ್ಷ ರೂ., ಪ್ರವರ್ಗ-2ಎ, 2ಬಿ, 3ಎ, 3ಬಿ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ 1 ಲಕ್ಷ ರೂ.ಗಳ ಒಳಗೆ ಇತರಬೇಕು. ಇಲಾಖೆಯ ವೆಬ್‍ಸೈಟ್ www.bcwd.karnataka.gov.in ಮೂಲಕ ಅಕ್ಟೋಬರ 22 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಂಜುನಾಥ ಡೊಂಬರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 080-8050370006, 08354-236419ಗೆ ಸಂಪರ್ಕಿಸಬಹುದಾಗಿದೆ.
Be the first to comment