ರಾಜ್ಯ ಸುದ್ಧಿಗಾಗಿ
ದೇವನಹಳ್ಳಿ
ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಸದಾಶಿವ ಆಯೋಗದ ವರದಿ ಶೀಘ್ರ ಜಾರಿಯಾಗಬೇಕು. ಪರಿಶಿಷ್ಟ ಜಾತಿಯಲ್ಲಿ ಅಸ್ಪೃಶ್ಯ ಸಮುದಾಯಗಳಿಗೆ ಆಗುತ್ತಿರುವ ವಂಚನೆ ಮತ್ತು ಒಳಮೀಸಲಾತಿ ನ್ಯಾಯ ಸಿಗುತ್ತಿಲ್ಲ ಕೂಡಲೇ ನ್ಯಾಯ ಒದಗಿಸುವ ಕೆಲಸವನ್ನು ಕೇಂದ್ರ ಸರಕಾರ ಮಾಡಲು ರಾಜ್ಯ ಸರಕಾರ ಶಿಫಾರಸ್ಸು ಮಾಡಬೇಕು ಎಂದು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾದಿಗ ಸಮುದಾಯ (ಎಡಗೈ) ಮುಖಂಡರು
ಬೆಂಗಳೂರಿನ ರಾಜಭವನದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಲ್ಹೋಟ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಮಾತನಾಡಿ, ಅನೇಕ ವರ್ಷಗಳಿಂದ ಮಾದಿಗ ಸಮುದಾಯ ಸದಾಶಿವ ವರದಿ ಜಾರಿಗಾಗಿ ಅನೇಕ ಪ್ರತಿಭಟನೆಗಳನ್ನು ಮಾಡಿಕೊಂಡು ಬಂದಿದೆ. ರಾಜ್ಯಸರ್ಕಾರ ವಿಧಾನಸಭೆಯ ವಿಧಾನಮಂಡಲದ ಅಧಿವೇಶನದಲ್ಲಿ ಸದಾಶಿವ ವರದಿಯನ್ನು ಮಂಡಿಸಿ ಕೇಂದ್ರಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸದಾಶಿವ ವರದಿಯನ್ನು ಜಾರಿಗೆ ತರುವುದರ ಮೂಲಕ ಸಮುದಾಯಕ್ಕೆ ಅನುಕೂಲ ಮಾಡಿಕೊಡಬೇಕು. ಬಸವರಾಜ ಬೊಮ್ಮಾಯಿ ಅವರು, ಬಸವಣ್ಣನವರ ಅನುಯಾಯಿ. ಬಸವಣ್ಣನವರ ಸಿದ್ಧಾಂತ ಅಳವಡಿಸಿಕೊಂಡವರು. ಹೀಗಾಗಿ, ಈ ವರದಿಯನ್ನು ಜಾರಿಗೆ ತರಬೇಕು. ಆಂಧ್ರದಲ್ಲಿ ಮಂದಕೃಷ್ಣ ಮಾದಿಗ ಒಳಮೀಸಲಾತಿ ಬಗ್ಗೆ ಹೋರಾಟ ಮಾಡಿದ್ದರು. ಕೇಂದ್ರ ಸರ್ಕಾರದ ಮುಂದೆಯೂ ಈ ಪ್ರಸ್ತಾಪವಿದೆ. ಈ ಕೆನೆಪದರ ಮೀಸಲಾತಿಯನ್ನು ಶೀಘ್ರ ಜಾರಿಗೊಳಿಸಬೇಕು.ಎಂದು ಹೇಳಿದರು.
ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿzಗ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ಮಾಡಿಸಿದ್ದರು. ಆ ವರದಿಯನ್ನು ಇನ್ನೂ ಬಹಿರಂಗಪಡಿಸಿಲ್ಲ. ಜಾತಿ ಗಣತಿ ವರದಿಯನ್ನು ಮುಖ್ಯಮಂತ್ರಿ ಬಿಡುಗಡೆ ಮಾಡಬೇಕು. ಇದರಿಂದ ಮೀಸಲಾತಿ ಬಗ್ಗೆಯೂ ತಿಳಿಯಲಿದೆ. ತುಳಿತಕ್ಕೆ ಒಳಗಾದವರಿಗೆ ವಿಶೇಷ ಕಾರ್ಯಕ್ರಮಗಳು ನೀಡಬಹುದು. ಎಸ್.ಸಿ., ಎಸ್.ಟಿ., ಹಿಂದುಳಿದ ವರ್ಗಗಳು ಯಾರೇ ಆಗಿರಲಿ ಅವರಿಗೂ ಮೀಸಲಾತಿ ಕೊಡಬೇಕು ಎಂದು ಆಗ್ರಹಿಸಿದರು.ಕರ್ನಾಟಕ ರಾಜ್ಯ ಮಾದಿಗ ದಂಡೋರ ಪ್ರಚಾರ ಸಮಿತಿ ಅಧ್ಯಕ್ಷ ಬುಳ್ಳಹಳ್ಳಿ ರಾಜಪ್ಪ ಮಾತನಾಡಿ, ಪರಿಶಿಷ್ಟ ಜಾತಿಗೆ ನೀಡಲಾಗಿರುವ ಶೇ.೧೫ ರಷ್ಟು ಮೀಸಲಾತಿ ೧೦೧ ಅಸ್ಪೃಶ್ಯ ಜಾತಿಗಳಿಗೆ ಸಮಾನವಾಗಿ ಹಂಚಿಕೆಯಾಗಿಲ್ಲ. ಅದಕ್ಕಾಗಿ ಮೂರು ದಶಕಗಳಿಂದಲೂ ಹೋರಾಟ ನಡೆಯುತ್ತಿದ್ದು, ೨೦೦೪ ರಲ್ಲಿ ನೇಮಕವಾದ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಿ ಎಂಟು ವರ್ಷ ಕಳೆದರೂ ಇನ್ನು ಯತಾವಥಾವತ್ತಾಗಿ ಜಾರಿಗೊಳಿಸಿಲ್ಲ. ರಾಜ್ಯ ಸರ್ಕಾರ ವರದಿಯನ್ನು ಅಂಗೀಕರಿಸಿ ಅನುಷ್ಟಾನಕ್ಕಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ದಲಿತರಲ್ಲಿ ಪ್ರಸ್ತುತ ಎಡಗೈ, ಬಲಗೈ, ಬೋವಿ, ಲಂಬಾಣಿ ಸಮುದಾಯಗಳಿವೆ. ಯಾವ ಸಮುದಾಯಗಳಿಗೂ ಅನ್ಯಾಯ ಆಗಬಾರದು. ಆ ರೀತಿ ಮೀಸಲಾತಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಉಖಿಸಿದೆ. ಒಳಮೀಸಲಾತಿ ಬಗ್ಗೆ ನ್ಯಾಯಮೂರ್ತಿ ಸದಾಶಿವ ಅವರು ಸವಿಸ್ತಾರವಾದ ವರದಿ ತಯಾರಿಸಿ ಸರ್ಕಾರಕ್ಕೆ ನೀಡಿzರೆ. ಪ್ರಸ್ತುತ ಸರಿಯಾದ ಪ್ರಮಾಣದಲ್ಲಿ ಮೀಸಲಾತಿ ಸಿಗುತ್ತಿಲ್ಲ. ಈ ವರದಿ ಜಾರಿಯಾದರೆ ಮೀಸಲಾತಿಗೆ ನ್ಯಾಯ ಸಿಗಲಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ವರದಿ ಜಾರಿಗೆ ಮುಂದಾಗಿದ್ದರು. ಆದರೆ, ಚುನಾವಣೆ ಎದುರಾದ ಕಾರಣ ಅಲ್ಲಿಗೇ ಕೈಬಿಟ್ಟಿದ್ದರು ಎಂದು ಹೇಳಿದರು.ಮನವಿ ಪತ್ರ ಸ್ವೀಕರಿಸಿರುವ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಮಾತನಾಡಿ, ಸರಕಾರದೊಂದಿಗೆ ಈ ವಿಚಾರದ ಕುರಿತು ಚರ್ಚೆ ನಡೆಸಿ, ಎ ಸಮುದಾಯಗಳಿಗೂ ನ್ಯಾಯ ಒದಗಿಸುವ ಭರವಸೆ ನೀಡಿದರು.ಈ ವೇಳೆಯಲ್ಲಿ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಹುಸೇನಪ್ಪಸ್ವಾಮಿ ಖಜಾಂಚಿ ಗೋಪಾಲ್ ಪುರ ಮುನಿರಾಜ, ಹುಬ್ಬಳ್ಳಿ ಗಂಗಾಧರ್ ಪೇರೂರ್ ಇದ್ದರು.
Be the first to comment