ವರದಿ-ಸುಚಿತ್ರಾ ನಾಯ್ಕ ಹೊನ್ನಾವರ

ಸಪ್ಟೆಂಬರ್ 17 ಕೋವಿಡ್ ಲಸಿಕಾ ಮಹಾಮೇಳ : ವ್ಯಾಕ್ಸಿನ್ ಪಡೆಯಲು ಬಯಸುವವರು ಪ್ರಯೋಜನ ಪಡೆದುಕೊಳ್ಳಿ

CHETAN KENDULI

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 17 ರಂದು ಬೃಹತ್ ಕೋವಿಡ್ ಲಸಿಕಾ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಸುಮಾರು ಎಂಟು ಮುಕ್ಕಾಲು ಲಕ್ಷ ಜನರಿಗೆ ಮೊದಲನೇ ಡೋಸ್ ಹಾಕಲಾಗಿದೆ ಹಾಗು ಸುಮಾರು 2,85 ಲಕ್ಷ ಜನರಿಗೆ 2 ನೇ ಡೋಸ್ ಲಸಿಕೆ ನೀಡಲಾಗಿದೆ. ಜಿಲ್ಲೆಯಲ್ಲಿ ಸುಮಾರು 1 ಲಕ್ಷದ 20 ಸಾವಿರ ಫಲಾನುಭವಿಗಳು ಮೊದಲನೇ ಡೋಸ್ ಪೂರೈಸಿ 2 ನೇ ಡೋಸ್ ಲಸಿಕೆಯನ್ನು ಪಡೆಯಲು ಅರ್ಹರಾಗಿದ್ದಾರೆ.

2 ಲಕ್ಷದಷ್ಟು ಜನರು ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊದಲನೇ ಡೋಸ್ ಪಡೆಯುವುದು ಬಾಕಿ ಇದೆ. ಸೆಪ್ಟೆಂಬರ್ 17 ರ ಶುಕ್ರವಾರದಂದು 350 ಲಸಿಕಾ ಕೇಂದ್ರಗಳಲ್ಲಿ ಸುಮಾರು 1 ಲಕ್ಷ ಜನರಿಗೆ ಲಸಿಕೆಯನ್ನು ನೀಡುವ ಗುರಿಯನ್ನು ಹೊಂದಲಾಗಿದೆ. ಈ ದಿನದಂದು ಇದುವರೆಗೆ ಮೊದಲನೇ ಡೋಸ್ ಲಸಿಕೆಯನ್ನು ಪಡೆಯದವರು, ಮೋದಲನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದು 84 ದಿನ ಪೂರೈಸಿರುವವರು, ಮೊದಲನೇ ಡೋಸ್ ಕೊವ್ಯಾಕ್ಸಿನ್ ಲಸಿಕೆ ಪಡೆದು 28 ದಿನ ಪೂರೈಸಿರುವವರು, ಗರ್ಭಿಣಿಯರು ಹಾಗೂ ಬಾಣಂತಿಯರು ಪಾಲ್ಗೊಂಡು ಲಸಿಕೆಯನ್ನು ಪಡೆಯುವ ಮೂಲಕ ಕೋವಿಡ್ ಕಾಯಿಲೆಯಿಂದ ಉಂಟಾಗಬಹುದಾದ ತೊಂದರೆಗಳಿoದ ರಕ್ಷಿಸಿಕೊಳ್ಳಬೆಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಕುಮಟಾ ಪಟ್ಟಣದ ಚಿತ್ರಗಿ ಹಿರಿಯ ಪ್ರಾಥಮಿಕ ಶಾಲೆ, ಪುರಭವನ, ಹೆಗಡೆ ಸರ್ಕಲ್, ಕುಮಟಾ ಸರಕಾರಿ ಆಸ್ಪತ್ರೆ, ವಾಳಖೆ ಸಭಾಭವನ, ಹೊನ್ಮಾವ್ ಮುಂತಾದ ಭಾಗದಲ್ಲಿ ಬೆಳಿಗ್ಗೆ 9.30 ರಿಂದ ಮದ್ಯಾಹ್ನ 4 ಗಂಟೆವರೆಗೆ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಗಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರು ಆಯಾ ಲಸಿಕಾ ವಿತರಣಾ ಕೇಂದ್ರಗಳಿಗೆ ತೆರಳಿ ಲಸಿಕೆ ಪಡೆದುಕೊಳ್ಳುವಂತೆ ಕುಮಟಾ ಪುರಸಭೆ ಮತ್ತು ಆರೋಗ್ಯ ಇಲಾಖೆ ಜಂಟಿ ಮಾಹಿತಿ ನೀಡಿದೆ.
ವರದಿ-ಸುಚಿತ್ರಾ ನಾಯ್ಕ ಹೊನ್ನಾವರ

Be the first to comment

Leave a Reply

Your email address will not be published.


*