ಜಿಲ್ಲಾ ಸುದ್ದಿಗಳು
ಕಾರವಾರ
ಜಿಲ್ಲೆಯಾದ್ಯಂತ ಎಲ್ಲ ಅಧೀನ ನ್ಯಾಯಾಲಯ ಮತ್ತು ಜಿಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 30ರಂದು ಮೆಗಾ ಲೋಕ್ ಅದಾಲತ್ ನಡೆಸಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಕುಮಾರ್ ಶೆಟ್ಟಿ ಹೇಳಿದರು. ಕಾರವಾರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಈ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಕಾನೂನಿನ್ವಯರಾಜಿ ಆಗಬಹುದಾದ ಕ್ರಿಮಿನಲ್ ಪ್ರಕರಣಗಳು, ಎಂ.ಎಂ.ಆರ್.ಡಿ ಪ್ರಕರಣಗಳು ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪರಿಹಾರ ಕೋರಿರುವ ಪ್ರಕರಣಗಳು, ಸ್ಥಳೀಯ ಸಂಸ್ಥೆಗಳ ಪರ ಮತ್ತು ವಿರುದ್ಧ ದಾಖಲಾದ ಪ್ರಕರಣ, ಬ್ಯಾಂಕಗಳಿಗೆ ಸಂಬಂಧಿಸಿದ ಪ್ರಕರಣ, ವೈವಾಹಿಕ ಅಥವಾ ಜೀವನಾಂಶ ಪ್ರಕರಣ, ಆಸ್ತಿಯಲ್ಲಿ ವಿಭಾಗ ಕೋರಿರುವ ದಾವೆಗಳು, ಇತರೆ ಸಿವ್ಹಿಲ್ ವ್ಯಾಜ್ಯಗಳು ಹಾಗೂ ಕಾರ್ಮಿಕ ನಷ್ಟ ಪರಿಹಾರ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದ್ದು, ಬ್ಯಾಂಕ್, ನೀರು ಮತ್ತು ವಿದ್ಯುತ್‌ಗೆ ಸಂಬಂಧಿಸಿದ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಅವಕಾಶವಿದೆ. ವಕೀಲರು, ಸಾರ್ವಜನಿಕರು ಹಾಗೂ ಕಕ್ಷಿದಾರರುಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ತಿಳಿಸಿದೆ.
Be the first to comment