ಕಮತಗಿ ಲಸಿಕಾ ಕೇಂದ್ರಗಳಿಗೆ ಸಿಇಓ ಬೇಟಿ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ: (ಕಮತಗಿ)ಪಟ್ಟಣದಲ್ಲಿ ಬೃಹತ್ ಕೋವಿಡ್ ಲಸಿಕಾ ಮೇಳದ ಅಂಗವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ,ದುರ್ಗಾದೇವಿ,ದಾನಮ್ಮದೇವಿ ದೇವಸ್ಥಾನಗಳಲ್ಲಿ ನಿರ್ಮಿಸಲಾಗಿದ್ದ ಲಸಿಕಾ ಕೇಂದ್ರಗಳಿಗೆ ಜಿಪಂ ಸಿಇಓ ಟಿ.ಭೂಬಾಲನ್ ಬೇಟಿ ನೀಡಿ ಪರಿಶೀಲಿಸಿದರು.

ಜಿಲ್ಲಾ ಆಡಳಿತ ಮತ್ತು ಆರೋಗ್ಯ ಇಲಾಖೆ ಮತ್ತು ಪೌರಾಡಳಿತ ಇವರ ಸಹಯೋಗದೊಂದಿಗೆ ಪಟ್ಟಣ ಪಂಚಾಯತ ಕಾರ್ಯಾಲಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಕೋವಿಡ್ ಲಸಿಕಾ ಮೇಳದ ಅಂಗವಾಗಿ ಪಟ್ಟಣದಲ್ಲಿ ೫ ಲಸಿಕಾ ಕೇಂದ್ರಗಳನ್ನು ತೆರಯಲಾಗಿತ್ತು, ೫ ಲಸಿಕಾ ಕೇಂದ್ರಗಳಿಗೆ ಬಾಗಲಕೋಟ ಜಿಲ್ಲಾ ಪಂಚಾಯತ ಸಿಇಓ ಟಿ.ಭೂಬಾಲನ್ ಬೇಟಿ ನೀಡಿ ಪರಿಶೀಲಿಸಿದ ನಂತರ ಅವರು ಆರೋಗ್ಯ ಇಲಾಖೆ ಸಿಬ್ಬಂದಿ ಅವರಿಂದ ಮಾಹಿತಿ ಪಡೆದುಕೊಂಡರು.

ಕಮತಗಿ,ಚಿಕಮಾಗಿ ಕಡಿವಾಲ ಕಲ್ಲಾಪೂರ,ಮೂಗನೂರ ಗ್ರಾಮಗಳಲ್ಲಿ ನಿರ್ಮಿಸಲಾಗಿದ್ದ ಲಸಿಕಾ ಕೇಂದ್ರಗಳಲ್ಲಿ ಬೆಳಿಗ್ಗೆ ಇಂದ ಸಂಜೆ ೫ಗಂಟೆಯವರೆಗೆ ಒಟ್ಟು ೧೪೭೬ ಜನರು ಲಸಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ಕಮತಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವಿಜಯಲಕ್ಷ್ಮಿ ಮರಿಶೆಟ್ಟಿ ತಿಳಿಸಿದ್ದಾರೆ.

ಬೃಹತ್ ಕೋವಿಡ್ ಲಸಿಕಾ ಮೇಳದಲ್ಲಿ ಕಮತಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ,ಕಮತಗಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿ,ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

Be the first to comment

Leave a Reply

Your email address will not be published.


*