ಬಿಸಿಎಂ : ವಸತಿ ನಿಲಯ ಪ್ರವೇಶಕ್ಕೆ ಅರ್ಜಿ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಂದ ಕಾರ್ಯನಿರ್ವಹಿಸುತ್ತಿರುವ ಹುನಗುಂದ ಮ್ಯಾಟ್ರೀಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯ ಮತ್ತು ಇಲಕಲ್ಲ ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರಸಕ್ತ ಸಾಲಿಗೆ ಹೊಸದಾಗಿ ಸೇರಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ, ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ಆದಾಯ ಪ್ರವರ್ಗ-1, ಎಸ್.ಸಿ, ಎಸ್.ಟಿ, ಇವರಿಗೆ 2.50 ಲಕ್ಷ ರೂ.ಮಿತಿ ಹಾಗೂ ಪ್ರ-,2ಎ,2ಬಿ,3ಎ,3ಬಿ ಇತರೆ ಹಿಂದೂಳಿದ ವರ್ಗದವರಿಗೆ 1ಲಕ್ಷ ರೂ. ಮಿತಿಯಲ್ಲಿರಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿ ಅಕ್ಟೋಬರ್ 22 ಆಗಿದೆ. www.bcwd.Karnataka.gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಹುನಗುಂದ ತಾಲ್ಲೂಕ ಹಿಂದೂಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*