ರಾಜ್ಯ ಸುದ್ದಿಗಳು
ಕರುನಾಡ ವಿಜಯಸೇನೆಯ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿಗಳು ಆದ ನೆ. ಲ. ರಾಮ್ ಪ್ರಸಾದ್ ಗೌಡ ರವರ ನೇತೃತ್ವದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಾಜ್ಯದ ಮೇಕೆದಾಟು ಯೋಜನೆಯ ಕಾಮಗಾರಿಯನ್ನು ಶೀಘ್ರವಾಗಿ ಪ್ರಾರಂಭಿಸಬೇಕೆಂದು ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ನೆ. ಲ. ರಾಮ್ ಪ್ರಸಾದ್ ಗೌಡ ರವರು ಕೆ ಆರ್ ಎಸ್ ಡ್ಯಾಮ್ ಮೂಲಕ ತಮಿಳುನಾಡಿಗೆ ಹರಿಸುತ್ತಿರುವ ನೀರು ವ್ಯರ್ಥವಾಗುತ್ತಿದ್ದು ಮೇಕೆದಾಟು ಆಣೆಕಟ್ಟು ನಿರ್ಮಾಣದಿಂದ ಸಾವಿರಾರು ರೈತರಿಗೆ ಅನುಕೂಲವಾಗಲಿದೆ ಹಾಗಾಗಿ ಕರ್ನಾಟಕ ಸರ್ಕಾರ ಈ ಕೂಡಲೇ ಮೇಕೆದಾಟು ಆಣೆಕಟ್ಟು ಕಾಮಗಾರಿಯನ್ನು ಪ್ರಾರಂಭಿಸಬೇಕೆಂದು ಅಗ್ರಹಿಸಿದರು.
ಈ ಸಂದರ್ಭದಲ್ಲಿ ಕರುನಾಡ ವಿಜಯಸೇನೆ ರಾಜ್ಯ ಕಾರ್ಯದರ್ಶಿ ಎ. ನಂಜಪ್ಪ ಮಾತನಾಡಿ ಈ ಮೇಕೆದಾಟು ಆಣೆಕಟ್ಟು ಕಟ್ಟುವುದರಿಂದ ಬೆಂಗಳೂರು ಸೇರಿ ನಗರ ಹಾಗೂ ಹಲವು ಗ್ರಾಮೀಣ ಪ್ರದೇಶಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುಚ್ಛಕ್ತಿ, ಉತ್ತಮ ಕೃಷಿಗೆ ಅನುಕೂಲವಾಗಲಿದ್ದು ಇಂತಹ ಉತ್ತಮ ಯೋಜನೆಯ ಕಾಮಗಾರಿಯನ್ನು ಕರ್ನಾಟಕ ಸರ್ಕಾರವು ತಕ್ಷಣವೇ ಪ್ರಾರಂಭಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ಕವಿತಮ್ಮ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರಾದ ಪ್ರದೀಪ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾರ್ಮಿಕ ಘಟಕದ ಅಧ್ಯಕ್ಷರಾದ ದೀಪುಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೋದಂಡಿ, ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷರಾದ ಶೋಭಮ್ಮ ಹಾಗೂ ಕರುನಾಡ ವಿಜಯ ಸೇನೆಯ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
Be the first to comment