ಪ್ರತಿ ಗ್ರಾಮ ಮತ್ತು ನಗರ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ ಅಭಿಯಾನ ಚುರುಕು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಲಸಿಕಾಅಭಿಯಾನಕ್ಕೆ ಹಸಿರು ನಿಶಾನೆ | ೭೨ಸಾವಿರ ಲಸಿಕೆ ನೀಡುವ ಗುರಿ

ವರದಿ: ಹೈದರ್ ಸಾಬ್, ಕುಂದಾಣ

ರಾಜ್ಯ ಸುದ್ದಿಗಳು 

ದೇವನಹಳ್ಳಿ

ನಗರ ಮತ್ತು ಗ್ರಾಮ ಮಟ್ಟದಲ್ಲಿ ಕೋವಿಡ್ ಲಸಿಕೆ ಅಭಿಯಾನವನ್ನು ಪ್ರಾರಂಭಿಸಿದ್ದು, ಪ್ರತಿ ನಾಗರೀಕರು ಮತ್ತು ಗ್ರಾಮಸ್ಥರು ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು. ಕೊರೊನಾ ಮುಕ್ತರಾಗಲು ಲಸಿಕೆಯೊಂದೆ ರಾಮಭಾಣವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.ದೇವನಹಳ್ಳಿ ಪಟ್ಟಣದ ಪಟ್ಟಣದ ಮಿನಿವಿಧಾನಸೌಧ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಬೃಹತ್ ಕೋವಿಡ್-೧೯ ಲಸಿಕಾ ಮೇಳ ಅಂಗವಾಗಿ ಲಸಿಕೆಗಾಗಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು. ಕೊರೋನಾ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಸರ್ಕಾರ ಉಚಿತವಾಗಿ ಲಸಿಕೆಗಳನ್ನು ಹಾಕಲಾಗುತ್ತಿದೆ. ಜನರು ಇದರ ಸದುಪಯೋಗ ಪಡೆದುಕೊಂಡು ಸದೃಢ ಆರೋಗ್ಯದ ಜೊತೆಗೆ ಕೊರೋನಾ ಬಾರದಂತೆ ಮುನ್ನೆಚ್ಚರಿಕೆ ವಹಿಸಬಹುದಾಗಿದೆ ಜಿಲ್ಲೆಯಲ್ಲಿ ೨ಲಕ್ಷ ೫೮ಸಾವಿರ ಜನ ಲಸಿಕೆ ಪಡೆಯಬೇಕಾಗಿದೆ. ಜಿಲ್ಲೆಯಲ್ಲಿ ಶೇ.೬೦ರಷ್ಟು ಲಸಿಕೆಯನ್ನು ಹಾಕಿಸಲಾಗಿದೆ. ಲಸಿಕಾ ಅಭಿಯಾನದಲ್ಲಿ ೭೨ಸಾವಿರ ಲಸಿಕೆ ನೀಡುವ ಗುರಿಯನ್ನು ಹೊಂದಿದ್ದೇವೆ. ಜಿಲ್ಲೆಯಲ್ಲಿ ಒಟ್ಟು ೮ಲಕ್ಷ ೩೩ಸಾವಿರದ ೬೪೧. ೧೮ವರ್ಷ ಮೇಲ್ಪಟ್ಟವರಿಗೆ ನೀಡುವ ಗುರಿಯನ್ನು ಹೊಂದಲಾಗಿದೆ. ಈವರೆಗೂ ೫ಲಕ್ಷ ೭೩ಸಾವಿರದ ೦೮೯ಜನರಿಗೆ ಲಸಿಕೆ ನೀಡಲಾಗಿದೆ. ಒಟ್ಟುಜಿಲ್ಲೆಯಲ್ಲಿ ೩೨೦ ಜಾಗಗಳಲ್ಲಿ ಲಸಿಕೆ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಮನೆಮನೆಗೆ ತೆರಳಿ ಲಸಿಕೆ ಹಾಕಲಾಗುತ್ತದೆ. ಗ್ರಾಮಮಟ್ಟಗಳಲ್ಲಿ ಮತ್ತು ಪಟ್ಟಣಗಳ ವ್ಯಾಪ್ತಿಯಲ್ಲಿ ಬರುವ ವಾರ್ಡ್ಗಳಲ್ಲಿಯೇ ಲಸಿಕೆ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ೬೦ ವಾಹನಗಳ ಮೂಲಕ ಗ್ರಾಮ ಮಟ್ಟದಲ್ಲಿಯೇ ೪ಜನರ ತಂಡ ಮಾಡಿ ಲಸಿಕೆ ಬಗ್ಗೆ ಮಾಹಿತಿಯನ್ನು ನೀಡಿ ಲಸಿಕೆ ಹಾಕಿಸಿಕೊಳ್ಳುವಂತೆ ಮಾಡಲಾಗುತ್ತಿದೆ. ಮಸೀದಿಗಳ ಹತ್ತಿರ ಮುಸಲ್ಮಾನರು ಪ್ರಾರ್ಥನೆಗೆ ಬರುವ ವೇಳೆಯಲ್ಲಿ ಲಸಿಕೆ ಹಾಕಿಸಲು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ಯಶಸ್ವಿಯಾಗಿ ಲಸಿಕಾ ಅಭಿಯಾನವನ್ನು ಮಾಡಲಾಗುತ್ತಿದೆ ಎಂದರು.

CHETAN KENDULI

ಶಾಸಕ ಎಲ್.ಎನ್. ನಾರಾಯಣಸ್ವಾಮಿ ಮಾತನಾಡಿ, ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಲಸಿಕೆ ಹಾಕಿಸಿಕೊಳ್ಳಬೇಕು. ೩ನೇ ಅಲೆಯಿಂದ ರಕ್ಷಣೆ ಮಾಡಿಕೊಳ್ಳಲು ಸಮಾಜದಲ್ಲಿ ಜೀವಿಸಲು ಸಾಧ್ಯವಾಗಿದೆ. ಕೊರೋನಾ ಸೋಂಕಿನಿoದ ರಕ್ಷಣೆ ಮಾಡಿಕೊಳ್ಳಲು ಲಸಿಕೆ ಅನಿವಾರ್ಯವಾಗಿದೆ ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಕೊರೋನಾದಿಂದ ಮುಕ್ತರಾಗಬೇಕಾದರೆ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಸದೃಢ ಆರೋಗ್ಯದ ಜೊತೆ ಕೊರೋನಾವನ್ನು ದೂರ ಮಾಡಬಹುದಾಗಿದೆ. ಜಿಲ್ಲಾಡಳಿತದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಕೊರೋನಾ ನಿರ್ಮೂಲನೆಗೆ ಪ್ರತಿ ಜನರಿಗೆ ಲಸಿಕೆ ಹಾಕಿಸಿಕೊಳ್ಳಲು ಅರಿವು ಮೂಡಿಸಿ ಲಸಿಕೆಗೆ ಆಧ್ಯತೆ ನೀಡಿ ಅಧಿಕಾರಿಗಳು ಶ್ರಮವಹಿಸಿದ್ದಾರೆ. ೨ಲಕ್ಷ ೫೮ಸಾವಿರ ಜನರಿಗೆ ಪೂರ್ಣವಾಗಿ ಲಸಿಕೆ ಹಾಕಿಸಿದರೆ ಹೆಚ್ಚು ಅನುಕೂಲವಾಗುತ್ತದೆ. ಎಂದರು.

ಈ ವೇಳೆಯಲ್ಲಿ ಜಿಪಂ ಸಿಇಒ ಎಂ.ಆರ್.ರವಿಕುಮಾರ್, ಅಪರ ಜಿಲ್ಲಾಧಿಕಾರಿ ವಿಜಯ ಈ ರವಿಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎ.ತಿಪ್ಪೇಸ್ವಾಮಿ, ತಹಶೀಲ್ದಾರ್ ಅನಿಲ್ ಕುಮಾರ್ ಅರೋಲಿಕರ್, ತಾಪಂ ಕಾರ್ಯನಿರ್ವಹಣಾಧಿಕಾರಿ ವಸಂತಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಗೀತಾ, ಪುರಸಭಾ ಸ್ಥಾಯಿಸಮಿತಿ ಅಧ್ಯಕ್ಷ ಎಸ್.ನಾಗೇಶ್, ಪುರಸಭಾ ಸದಸ್ಯ ಜಿ.ಎ. ರವೀಂದ್ರ, ಟೌನ್ ಜೆಡಿಎಸ್ ಅಧ್ಯಕ್ಷ ಮುನಿನಂಜಪ್ಪ, ಪ್ರಧಾನ ಕಾರ್ಯದರ್ಶಿ ಸಾಯಿಕುಮಾರ್ ಬಾಬು, ವೇಣುಗೋಪಾಲಸ್ವಾಮಿ ಒಳಾಂಗಣ ಕ್ರೀಡಾ ಸಂಘದ ಅಧ್ಯಕ್ಷ ಲಕ್ಷಿನಾರಾಯಣ್, ಪುರಸಭಾ ಮುಖ್ಯಾಧಿಕಾರಿ ಎ.ಹೆಚ್. ನಾಗರಾಜ್, ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

Be the first to comment

Leave a Reply

Your email address will not be published.


*