ಜಿಲ್ಲಾ ಸುದ್ದಿಗಳು
ಕಾರವಾರ
ಕಾರವಾರ ಹಾಗೂ ಗೋವಾದ ಪ್ರಮುಖ ಸಂಪರ್ಕ ಕೊಂಡಿಗಳಲ್ಲಿ ಒಂದಾಗಿರುವ ಕಾಳಿ ಸೇತುವೆಯಲ್ಲಿ ವಿದ್ಯುತ್ ದೀಪದ ವ್ಯವಸ್ಥೆ ಇಲ್ಲದೆ ರಾತ್ರಿ ವೇಳೆ ಸಂಚಾರಕ್ಕೆ ತೊಂದರೆ ಉಂಟಾಗಿದ್ದು ಸಾರ್ವಜನಿಕರು ಆತಂಕ ವ್ಯಕ್ತಪಡಿಸುವಂತಾಗಿದೆ.ಕಾಳಿ ನದಿಗೆ ಅಡ್ಡವಾಗಿ ನಿರ್ಮಾಣ ಮಾಡಲಾಗಿರುವ ಹಳೆ ಸೇತುವೆ ಹಾಗೂ ನೂತನ ಸೇತುವೆಯಲ್ಲಿ ವಿದ್ಯುತ್ ದೀಪದ ವ್ಯವಸ್ಥೆ ಇಲ್ಲದೆ ಇದ್ದುದರಿಂದ ಈ ರಸ್ತೆ ಮಾರ್ಗದಲ್ಲಿ ಸಂಚಾರ ಮಾಡುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.
ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪದವನ್ನಾಗಿ ಮಾಡಿದ ಬಳಿಕ ಇಲ್ಲಿ ವಿದ್ಯುತ್ ವ್ಯವಸ್ಥೆಯೇ ಇಲ್ಲದಂತಾಗಿದೆ. ಹಳೆ ಸೇತುವೆಯ ಮೇಲೆ ವಿದ್ಯುತ್ ಕಂಬವಿದ್ದು ಪ್ರತೀ ಬಾರಿ ಜನರು ಒತ್ತಾಯ ಮಾಡಿದರೂ ಬೆಳಕಿನ ವ್ಯವಸ್ಥೆ ಇಲ್ಲದಂತಾಗಿದೆ. ಅಲ್ಲದೆ ನೂತನವಾಗಿ ನಿರ್ಮಾಣ ಮಾಡಲಾಗಿರುವ ಸೇತುವೆ ಮೇಲೆ ವಿದ್ಯುತ್ ಕಂಬಗಳು ಇಲ್ಲದೇ, ರಾತ್ರಿ ವೇಳೆ ಅಪಘಾತಗಳು ಸಂಭವಿಸುತ್ತಿದೆ ಇದಲ್ಲದೇ ಆತ್ಮಹತ್ಯೆ ಸ್ಥಳ ಎನ್ನುವ ಕುಖ್ಯಾತಿ ಪಡೆದುಕೊಂಡಿದೆ. ಕಾಳಿ ಸೇತುವೆಯಲ್ಲಿ ರಾತ್ರಿ ವೇಳೆ ಸಂಚಾರಿಗಳು ಕತ್ತಲೆಯಲ್ಲಿ ಪ್ರಯಾಣ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ ಶೀಘ್ರವೇ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ವತ್ತಾಯ ಮಾಡಿದ್ದಾರೆ.
Be the first to comment