ಜಿಲ್ಲಾ ಸುದ್ದಿಗಳು
ಕಾರವಾರ
ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಹರಡುವಿಕೆಯ ಪ್ರಮಾಣ ಸ್ವಲ್ಪ ನಿಂಯಂತ್ರಣಕ್ಕೆ ಬಂದರೂ, ಪ್ರವಾಸೋದ್ಯಮ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಲಾಕ್‌ಡೌನ್ ಸಡಿಲಿಕೆ ಅನ್ವಯವಾಗಿರಲಿಲ್ಲ. ಆದರೆ ಇದೀಗ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಶೇಕಡಾ 1 ಕ್ಕಿಂತ ಕಡಿಮೆಯಿರುವ ಕಾರಣ ಕೋವಿಡ್ ನಿಯಮಗಳಲ್ಲಿ ಸಡಿಲಿಕೆ ಮಾಡಿ ಉತ್ತರ ಕನ್ನಡ ಜಿಲ್ಲಾಧಿಕಾರಿಗಳು ನೂತನ ಆದೇಶ ಜಾರಿಗೊಳಿಸಿದ್ದಾರೆ.ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಶೇ.1 ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇದೆ, ಜೋತೆಗೆ ಸಾವಿನ ಪ್ರಮಾಣ ಸಹ ಅತ್ಯಂತ ಕಡಿಮೆಯಾಗಿದೆ. ಪ್ರವಾಸೋಧ್ಯಮ ಹಾಗೂ ಧಾರ್ಮಿಕ ಕ್ಷೇತ್ರಕ್ಕೆ ಹೆಸರುವಾಸಿಯಾಗಿರುವ ಜಿಲ್ಲೆಯಲ್ಲಿ ಪ್ರವಾಸಿಗರ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚಿದೆ.
ಈ ನೂತನ ಆದೇಶದ ಪ್ರಕಾರ ಜಿಲ್ಲೆಯಲ್ಲಿ ಇರುವ ದೇವಸ್ಥಾನ ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ಪೂಜೆ, ಸೇವೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಇಂದಿನಿಂದ ಜಿಲ್ಲಾಧಿಕಾರಿ ಆದೇಶವು ಜಾರಿಯಾಗಿದ್ದು ಇದರಿಂದಾಗಿ ಗೋಕರ್ಣ, ಮುರುಡೇಶ್ವರ, ಇಡಗುಂಜಿ ಸೇರಿದಂತೆ ಹಲವು ಧಾರ್ಮಿಕ ಕ್ಷೇತ್ರಗಳಿಗೆ ಆಗಮಿಸುವ ಭಕ್ತರಿಗೆ ಸೇವೆಗಳಿಗೆ ಅವಕಾಶ ಸಿಕ್ಕಂತಾಗಿದೆ.ಕೋವಿಡ್ ಸಂಖ್ಯೆ ಈ ತಿಂಗಳಲ್ಲಿ ಅತ್ಯಲ್ಪವಾಗಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಈ ನೂತನ ಆದೇಶ ಹೊರಡಿಸಿದ್ದಾರೆ.
Be the first to comment