ವಿದ್ಯುತ್ ವಿತರಣಾ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಸಭೆ

ವರದಿ-ಸುಚಿತ್ರಾ ನಾಯ್ಕ ಹೊನ್ನಾವರ

ಜಿಲ್ಲಾ ಸುದ್ದಿಗಳು 

ಶಿರಸಿ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ವೃತ್ತ ವ್ಯಾಪ್ತಿಯಲ್ಲಿ ಹೊಸದಾಗಿ ವಿದ್ಯುತ್ ವಿತರಣಾ ಕೇಂದ್ರಗಳನ್ನು ಸ್ಥಾಪಿಸುವ ಕುರಿತು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಧ್ಯಕ್ಷತೆಯಲ್ಲಿ‌ ಮಹತ್ವದ ಸಭೆ ಬೆಂಗಳೂರಿನಲ್ಲಿ ನಡೆಯಿತು.ಶಿರಸಿ ವೃತ್ತದಲ್ಲಿ 33 ಕೆವಿ ರೆಫೆರನ್ಸ್ ಗಳನ್ನು ಕಲ್ಪಿಸಿಕೊಡುವ, ಶಕ್ತಿ ಪರಿವರ್ತಕಗಳನ್ನು ವೃದ್ಧಿಸುವ ಕಾಮಗಾರಿಗಳು ಹಾಗೂ ಇನ್ನಿತರೆ ಕಾಮಗಾರಿಗಳನ್ನು ಕೆ.ಪಿ.ಟಿ.ಸಿ.ಎಲ್ ವತಿಯಿಂದ ತ್ವರಿತವಾಗಿ ಕೈಗೆತ್ತಿಕೊಳ್ಳುವ ಮಹತ್ವದ ಸಭೆ ಇದಾಗಿತ್ತು.

CHETAN KSNDULI

ಸೋಮವಾರ ವಿಧಾನಸೌಧದಲ್ಲಿ ಇಂಧನ ಸಚಿವ ಸುನೀಲ್ ಕುಮಾರ್, ಸಚಿವ ಎಸ್.ಎಮ್.ಹೆಬ್ಬಾರ್ ಹಾಗೂ ಉ.ಕ.ಜಿಲ್ಲೆಯ ಶಾಸಕ ದಿನಕರ ಶೆಟ್ಟಿ, ಸುನೀಲ್ ನಾಯ್ಕ್, ಆರ್.ವಿ.ದೇಶಪಾಂಡೆ, ರೂಪಾಲಿ ನಾಯ್ಕ್ ಹಾಗೂ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ‌ ಪಾಲ್ಗೊಂಡಿದ್ದರು.

Be the first to comment

Leave a Reply

Your email address will not be published.


*