ಕರಾವಳಿ ಜಿಲ್ಲೆಗಳಲ್ಲಿ ಸಪ್ಟೆಂಬರ್ 24 ರವರೆಗೆ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ…!!

ವರದಿ-ಸುಚಿತ್ರಾ ನಾಯ್ಕ ಹೊನ್ನಾವರ

ಜಿಲ್ಲಾ ಸುದ್ದಿಗಳು 

ಕಾರವಾರ

ಕರಾವಳಿ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆ ಹೆಚ್ಚಾಗುವ ಸಾಧ್ಯತೆ ಇದೆ.ಇನ್ನೆರಡು ದಿನ ಹಾಸನ, ಕೊಡಗು, ಶಿವಮೊಗ್ಗ, ಮಂಡ್ಯ, ಕೋಲಾರ, ಮೈಸೂರು, ರಾಮನಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

CHETAN KENDULI

ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣಮಳೆಯಾಗಲಿದೆ.ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Be the first to comment

Leave a Reply

Your email address will not be published.


*