ಪ್ರವಾಸಿ ಸ್ಥಳಗಳು ಮತ್ತು ಜಲಸಾಹಸ ಕ್ರೀಡೆಗೆ ಸರ್ಕಾರದ ಅನುಮತಿ..!!

ವರದಿ-ಸುಚಿತ್ರಾ ನಾಯ್ಕ ಹೊನ್ನಾವರ

ಜಿಲ್ಲಾ ಸುದ್ದಿಗಳು 

ಕಾರವಾರ

ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣದ ನಿಯಂತ್ರಣಕ್ಕೆ ಬೇರೆ ರಾಜ್ಯ, ಜಿಲ್ಲೆಯಿಂದ ಉತ್ತರ ಕನ್ನಡಕ್ಕೆ ಬರುವ ಪ್ರವಾಸಿಗರ ಮೇಲೆ ಸಂಪೂರ್ಣವಾಗಿ ನಿರ್ಬಂಧ ಹೇರಲಾಗಿತ್ತು. ಸದ್ಯ ಜಿಲ್ಲೆಯಲ್ಲಿ ಕೊವಿಡ್ ಪಾಸಿಟಿವಿಟಿ ದರ 1 ಕ್ಕಿಂತ ಕಡಿಮೆ ಇದೆ. ಈ ಹಿನ್ನೆಲೆಯಲ್ಲಿ ಹಲವು ಸಾರ್ವಜನಿಕ ಚಟುವಟಿಕೆಗಳ ಮೇಲಿನ ನಿರ್ಬಂಧವನ್ನು ತೆರವು ಮಾಡಲಾಗಿದೆ.ಬೇರೆ ರಾಜ್ಯ, ಜಿಲ್ಲೆಯಿಂದ ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸಿಗರು ಆಗಮಿಸಿದರೆ ಕೊರೊನಾ ಸೋಂಕಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆ ಇದ್ದುದರಿಂದ, ಲಾಕ್ ಡೌನ್ ಅವಧಿಯ ಬಳಿಕವೂ ಜಿಲ್ಲೆಯ ಪ್ರವಾಸಿ ತಾಣಗಳು ಬರಿದಾಗಿದ್ದವು. ಅಂತೆಯೇ ಜಲಸಾಹಸ ಕ್ರೀಡೆಯನ್ನು ಸಹ ಸಂಪೂರ್ಣವಾಗಿ ಬಂದ್ ಮಾಡಲಾಗಿತ್ತು.

CHETAN KENDULI

ಕರ್ನಾಟಕದ ವಿವಿಧ ಜಿಲ್ಲೆ ಸೇರಿದಂತೆ ಪಕ್ಕದ ಮಹಾರಾಷ್ಟ್ರ ಹಾಗೂ ಇನ್ನಿತರ ಪ್ರದೇಶದಿಂದ ಇಲ್ಲಿ ಜಲ ಸಾಹಸ ಕ್ರೀಡೆಯ ಮೂಜು ಪಡೆಯಲು ಪ್ರವಾಸಿಗರು ಆಗಮಿಸುತ್ತಾರೆ ಇದರಿಂದ ಜಲಸಾಹಸ ಕ್ರೀಡೆ ಆರಂಭಿಸಲು ಅನುಮತಿ ನೀಡಲಾಗಿದೆ.ಜಿಲ್ಲೆಯ ಪ್ರವಾಸಿ ಸ್ಥಳಗಳು ಮತ್ತೆ ತೆರೆದುಕೊಳ್ಳುತ್ತಿದ್ದು, ಕಾರವಾರ ಕಡಲತೀರ ಸೇರಿದಂತೆ ದಾಂಡೇಲಿಯಲ್ಲಿ ಜಲಸಾಹಸ ಕ್ರೀಡೆ ಆರಂಭಿಸಲು ಸರಕಾರ ಗ್ರೀನ್ ಸಿಗ್ನಲ್ ನೀಡಿದೆ. ಕಂದಾಯ ಇಲಾಖೆಯ ಪ್ರಿನ್ಸಿಪಲ್ ಸೆಕ್ರೆಟರಿ ತುಷಾರ್ ಗಿರಿನಾಥ್ ಈ ಸಂಬಂಧ ಆದೇಶ ಹೊರಡಿಸಿದ್ದಾರೆ.ಕಾರವಾರ ಉಪ ವಿಭಾಗದ ಸಹಾಯಕ ಕಮಿಷನರ್ ವಿದ್ಯಾ ಚಂದರಗಿ ಸರ್ಕಾರದ ಆದೇಶವನ್ನು ಅನುಷ್ಟಾನ ಗೊಳಿಸಲಾಗುವುದು ಎಂದಿದ್ದಾರೆ.

ಕಾರವಾರ, ಭಟ್ಕಳದ ಮುರುಡೇಶ್ವದ ಕಡಲ ತೀರದಲ್ಲಿ ವಾಟರ್ ಬೋಟ್ ರೈಡಿಂಗ್ ಸೇರಿದಂತೆ ವಿವಿಧ ಜಲಕ್ರೀಡೆಗಳು ಜನರ ಗಮನ ಸೆಳೆದಿದ್ದವು. ಭಟ್ಕಳದ ನೇತ್ರಾಣಿಯಲ್ಲಿ ಸ್ಕೂಬಾ ಡೈವಿಂಗ್ ದೇಶದೆಲ್ಲೆಡೆ ಪ್ರಖ್ಯಾತಿ ಪಡೆದಿದೆ. ಆದರೆ ಕೊರೊನಾ ಸಂದರ್ಭದಲ್ಲಿ ಈ ಎಲ್ಲ ಜಲಸಾಹಸ ಕ್ರೀಡೆಗಳು ಮಂಕಾಗಿದ್ದವು. ಈಗ ಮತ್ತೆ ಪುನರ್ ಆರಂಭಿಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

Be the first to comment

Leave a Reply

Your email address will not be published.


*