ಜಿಲ್ಲಾ ಸುದ್ದಿಗಳು
ಬಾಗಲಕೋಟೆ : ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಭಾರತ ಕಾ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ಅಕ್ಟೋಬರ 2 ರಿಂದ ನವೆಂಬರ 14 ವರೆಗೆ ನಲ್ಸಾ ಪ್ಯಾನ್ ಇಂಡಿಯಾ ಜಾಗೃತಿ ಮತ್ತು ಔಟ್ರೀಚ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎಸ್.ದೇಶಪಾಂಡೆ ಹೇಳಿದರು.
ಜಿಲ್ಲಾ ನ್ಯಾಯಾಲಯದ ಸಭಾಭವನದಲ್ಲಿ 75ನೇ ಸ್ವಾಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ 25ನೇ ನಲ್ಸಾ ಸಂಭ್ರಮಾಚರಣೆ ಹಿನ್ನಲೆಯಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರ ನಿರ್ದೇಶನದ ಮೇರೆಗೆ ಜಿಲ್ಲೆಯಲ್ಲಿ ನಲ್ಸಾ ಪ್ಯಾನ್ ಇಂಡಿಯಾ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಅಕ್ಟೋಬರ 2 ಗಾಂಧೀ ಜಯಂತಿಯಂದು ಲೋಕ ಅದಾಲತ್‍ನ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸುವುದು, 4 ರಂದು ಬಾಲ್ಯವಿವಾಹ ನಿಷೇಧ ಮತ್ತು ಪಿಎನ್‍ಪಿಟಿ ಕಾಯ್ದೆ, 4 ರಂದು ಕಾರ್ಮಿಕ ಮತ್ತು ಗ್ರಾಹಕರ ಕಾನೂನು, 5 ರಂದು ಮೋಟಾರು ವಾಹನ, ಆರ್‍ಟಿಐ ಕಾಯ್ದೆ, 6 ರಂದು ಕೌಟುಂಬಿಕ ದೌರ್ಜನ್ಯ, ಅದಕ್ಕೆ ಸಿಗುವ ಪರಿಹಾರ, ವರದಕ್ಷಿಣೆ ನಿಷೇಧಕ್ಕೆ ಸಂಬಂಧಿಸಿದ ಕಾನೂನು, 7 ರಂದು ನಿರ್ವಹಣೆ ಹಕ್ಕುಗಳಿಗೆ ಸಂಬಂಧಿಸಿದ ಇತ್ತೀಚಿನ ಕಾನೂನುಗಳ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ನವೆಂಬರ 9 ರಂದು ಕಾನೂನು ಸೇವೆಗಳ ದಿನ ಎಂದು ಆಚರಿಸುವ ಮೂಲಕ ಆಹಾರ ತಡೆಗಟ್ಟಿವಿಕೆ, ಕಲಬರಕೆ ಕಾಯಿದೆ ಬಗ್ಗೆ ಜಾಗೃತಿ ಮೂಡಿಲಾಗುತ್ತದೆ. 10, 12 ಮತ್ತು 13 ರಂದು ಸ್ವಚ್ಚತೆಗೆ ಮನೆ ಭಾಗಿಲಿಗೆ ಅಭಿಯಾನ ಹಮ್ಮಿಕೊಳ್ಳುವ ಮೂಲಕ ಘನತ್ಯಾಜ್ಯ ನಿರ್ವಹಣೆ ಕುರಿತು ಮನೆ ಮನೆ ಪ್ರಚಾರ ಕಾರ್ಯವನ್ನು ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗುತ್ತದೆ. ನವೆಂಬರ 14 ರಂದು ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ತಾಲೂಕಾ ಮಟ್ಟದಲ್ಲಿಯೂ ಸಹ ಪ್ರತ್ಯೇಕವಾಗಿ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಇದಲ್ಲದೇ ಜಿಲ್ಲಾ, ತಾಲೂಕಾ ಮಟ್ಟದ ಕಾನೂನು ಸೇವಾ ಪ್ರಾಧಿಕಾರದಿಂದ ಶಿಬಿರವನ್ನು ಹಮ್ಮಿಕೊಳ್ಳುವ ಮೂಲಕ ನಾಗರಿಕರಿಗೆ ವಿವಿಧ ಸೇವೆಗಳನ್ನು ಒದಗಿಸುವ ಕಾರ್ಯವಾಗಬೇಕು. ಮತದಾರ ಪಟ್ಟಿಯಲ್ಲಿ ಆಧಾರ ಕಾರ್ಡ ನೋಂದಣಿ, ಆಯುಷ್ಮಾನ ಭಾರತ ಕಾರ್ಡ, ಬಿಪಿಎಲ್ ಕಾರ್ಡ, ಹಿರಿಯ ನಾಗರಿಕರ ನೋಂದಣಿ, ಅಂಗವಿಕಲರ ವ್ಯಕ್ತಿಗಳು ಮತ್ತು ಅವರ ಆರೈಕೆ ನೀಡುವವರ ನೊಂದಣಿ, ಕಾರ್ಮಿಕ ನೋಂದಣಿ, ಚಾಲನಾ ಪರವಾನಿಗೆ ವಿಮೆ ಹಾಗೂ ಇತ್ಯಾದಿಗಳನ್ನು ಸೇವೆ ಒದಗಿಸುವ ಕಾರ್ಯವಾಗಬೇಕು ಎಂದರು. ಮಹಿಳೆಯರಿಗಾರಿ ಎಲ್ಲ ಕಾನೂನು ಅರಿವು ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.ಕಾರ್ಯಕ್ರಮಗಳ ಯಶಸ್ವಿಗೆ ಜಿಲ್ಲಾ ಮತ್ತು ತಾಲೂಕಾ ಮಟ್ಟದ ವಿವಿಧ ಇಲಾಖೆಗಳ ಸಹಕಾರವು ಸಹ ಅಗತ್ಯವಾಗಿದ್ದು, ಎಲ್ಲರೂ ಕೈಜೋಡಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಭಾರತಿ ಬಣಕಾರ, ಜಿಲ್ಲಾ ಕಾರ್ಮಿಕ ಅಧಿಕಾರಿ ಬಿ.ಆರ್.ಜಾಧವ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ.ಪೂಜಾರ, ತಹಶೀಲ್ದಾರ ಜಿ.ಎಸ್.ಹೀರೆಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.
Be the first to comment