ರಾಜ್ಯ ಸುದ್ದಿಗಳು
ಬೆಂಗಳೂರು
ಲಾಲ್‌ಬಾಗ್ ಮತ್ತು ಕಬ್ಬನ್ ಪಾರ್ಕ್ ಮೀರಿಸುವಂತೆ ತೋಟಗಾರಿಕೆ ಇಲಾಖೆಯಿಂದ ಅತಿದೊಡ್ಡ ಸಸ್ಯಉದ್ಯಾನ ನಿರ್ಮಿಸಲು ನಿರ್ಧರಿಸಲಾಗಿದೆ. ನಂದಿ ಹಿಲ್ಸ್, ದೊಡ್ಡಬಳ್ಳಾಪುರ ಸುತ್ತಮುತ್ತಲಿನ ಸರ್ಕಾರಿ ಜಮೀನಿನಲ್ಲಿ ಪಾರ್ಕ್ ನಿರ್ಮಾಣಕ್ಕೆ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ತೋಟಗಾರಿಕಾ ಸಚಿವ ಮುನಿರತ್ನ ಸೂಚನೆ ನೀಡಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ವಿಹಾರಕ್ಕೆ ಹೋಗುವ ವಿಚಾರ ಬಂದ್ರೆ ಮೊದಲಿಗೆ ನೆನಪಾಗೋದೆ ಲಾಲ್ ಬಾಗ್ ಅಥವಾ ಕಬ್ಬನ್ ಪಾರ್ಕ್. ಈಗ ಅವರಡನ್ನು ಮೀರಿಸುವಂತಹ ದೊಡ್ಡ ಪಾರ್ಕ್ ನಿರ್ಮಾಣಕ್ಕೆ ಪ್ಲಾನ್ ಮಾಡಿಕೊಳ್ಳಲಾಗಿದೆ. ಅಹಮದಾಬಾದ್ ಸೈನ್ಸ್ ಸಿಟಿ ಪಾರ್ಕ್ ಮಾದರಿಯಂತೆ ದೊಡ್ಡ ಉದ್ಯಾನ ನಿರ್ಮಿಸಲು ತೋಟಗಾರಿಕೆ ಇಲಾಖೆಯ ಸಚಿವ ಮುನಿರತ್ನ ಮುಂದಾಗಿದ್ದಾರೆ.
ಬೆಂಗಳೂರಿನ ಸುತ್ತಮುತ್ತಲಿನ ಸರ್ಕಾರಿ ಜಮೀನಿನಲ್ಲಿ ಲಾಲ್‌ಬಾಗ್, ಕಬ್ಬನ್ ಪಾರ್ಕ್ಗಿಂತಲೂ ದೊಡ್ಡ ಪಾರ್ಕ್ ನಿರ್ಮಿಸಲು ತೋಟಗಾರಿಕಾ ಇಲಾಖೆ ನಿರ್ಧರಿಸಿದೆ. ತೋಟಗಾರಿಕಾ ಸಚಿವ ಮುನಿರತ್ನ ಪಾರ್ಕ್ ನಿರ್ಮಾಣಕ್ಕೆ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಯೋಜನೆಗೆ ಡಿಪಿಆರ್ ಸಿದ್ಧಪಡಿಸಲು ಸೂಚಿಸಿದ್ದಾರೆ. ನಂದಿ ಹಿಲ್ಸ್, ದೊಡ್ಡಬಳ್ಳಾಪುರ ಸುತ್ತಮುತ್ತಲಿನ ಸರ್ಕಾರಿ ಜಮೀನಿನಲ್ಲಿ ಪಾರ್ಕ್ ನಿರ್ಮಾಣಕ್ಕೆ ಚಿಂತನೆ ನಡೆದಿದೆ. 600-800 ಎಕರೆ ವಿಸ್ತೀರ್ಣದಲ್ಲಿ ಪಾರ್ಕ್ ನಿರ್ಮಿಸುವ ತೀರ್ಮಾನಕ್ಕೆ, ಅಕ್ಟೋಬರ್ 4ರಂದು ವಿಧಾನಸೌಧದಲ್ಲಿ ಸಭೆ ನಿಗದಿ ಮಾಡಲಾಗಿದೆ ಎಂದು ತೋಟಗಾರಿಕೆ ಇಲಾಖೆಯ ಸಚಿವ ಮುನಿರತ್ನ ತಿಳಿಸಿದ್ದಾರೆ.
Be the first to comment