ರಾಜ್ಯ ಸುದ್ದಿಗಳು
ಬೆಂಗಳೂರು
ವಿಪಕ್ಷ ನಾಯಕ ಸಿದ್ದರಾಮಯ್ಯ ಹಿಂದ ಸಮಾವೇಶಕ್ಕೆ ಹವಾಮಾನ ವೈಪರೀತ್ಯ ಅಡ್ಡಿಪಡಿಸಿದೆ. ಹೆಲಿಕಾಪ್ಟರ್ ನಲ್ಲಿ ದಾವಣಗೆರೆ ಸಮಾವೇಶಕ್ಕೆ ಹೋಗಲು ಸಿದ್ದು ಸಿದ್ದರಾಗಿದ್ರು. ಆದ್ರೆ, ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಇಂದು ಬೆಳಗ್ಗೆಯಿಂದಲೇ ದಾವಣಗೆರೆಯಲ್ಲಿ ಭಾರೀ ಮಳೆ, ಮತ್ತು ದಟ್ಟ ಮೋಡ ಆವರಿಸಿದ್ದ ಕಾರಣ ಹೆಲಿಕಾಪ್ಟರ್ ಲ್ಯಾಂಡಿಂಗ್ ಗೆ ಅನುಮತಿ ಸಿಗಲಿಲ್ಲ. ಹಾಗಾಗಿ ಕೊನೆ ಕ್ಷಣದಲ್ಲಿ ದಾವಣಗೆರೆ ಪ್ರವಾಸವನ್ನು ಸಿದ್ದರಾಮಯ್ಯ ರದ್ದು ಮಾಡಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ಲಾಲ್ಬಾಗ್ಗಿಂತಲೂ ದೊಡ್ಡ ಪಾರ್ಕ್..! ಸಚಿವ ಮುನಿರತ್ನ ಪ್ಲ್ಯಾನ್ ಮಾಡಿರೋ ಈ ಬೊಟ್ಯಾನಿಕಲ್ ಗಾರ್ಡನ್ ಎಷ್ಟು ಎಕರೆಯಲ್ಲಿರುತ್ತೆ ಗೊತ್ತಾ ?
ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹಿಂದ ಸಮಾವೇಶಕ್ಕೆ ನಡೆಸಲು ದಾವಣಗೆರೆ ತೆರಳಬೇಕಿತ್ತು. ಜಕ್ಕೂರು ಏರೋಡ್ರೋಂನಿಂದ ಹೆಲಿಕಾಪ್ಟರ್ ಮೂಲಕ ಸಿದ್ದರಾಮಯ್ಯ ತೆರಳಬೇಕಿತ್ತು. ಆದ್ರೆ, ತೀವ್ರ ಮೋಡ ಕವಿದ ವಾತಾವರಣ ಹಾಗೂ ಮಳೆ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಗೆ ಅನುಮತಿ ಸಿಗಲಿಲ್ಲ. ಕೊನೆ ಕ್ಷಣದಲ್ಲಿ ದಾವಣಗೆರೆ ಪ್ರವಾಸ ರದ್ದು ಮಾಡಿ, ದಾವಣೆಗೆರೆಯಲ್ಲಿ ನಡೆಯಲಿರುವ ಜಾತಿಗಣತಿ ಅನುಷ್ಠಾನದ ಹೋರಾಟಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಗೈರಾಗಿದ್ದಾರೆ.
Be the first to comment