ಜಿಲ್ಲಾ ಸುದ್ದಿಗಳು
ಕಾರವಾರ
ನಗರಾಭಿವೃದ್ಧಿ ಪ್ರಾಧಿಕಾರ ಕಾರವಾರ ಆಯುಕ್ತರು ಶೇಕಡಾ 50 ರ ಅನುಪಾತದಲ್ಲಿ ಜಮೀನನ್ನು ಅಭಿವೃದ್ಧಿ ಪಡಿಸಿ ಯೋಜನಾಬದ್ಧ ಬಡಾವಣೆಗಳನ್ನು ನಿರ್ಮಿಸುವ ಯೋಜನೆಯನ್ನು ಹೊಂದಲಾಗಿದೆ ಎಂದು ತಿಳಿಸಿದ್ದಾರೆ. ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರವು ಸರ್ಕಾರದ ಆದೇಶದಂತೆ ಸ್ಥಳೀಯ ಯೋಜನಾ ಪ್ರದೇಶದಲ್ಲಿ ಜಮೀನು ಹೊಂದಿರುವ ಭೂ ಮಾಲಿಕರಿಂದ ಶೇಕಡಾ 50 ರ ಅನುಪಾತದಲ್ಲಿ ಬಡಾವಣೆ ನಿರ್ಮಿಸಲು ಯೋಜನೆ ಹೊಂದಲಾಗಿದೆ. ಭೂ ಮಾಲೀಕರಿಂದ ಜಮೀನನ್ನು ಪಡೆದು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯ್ದೆ 1987 ರ ಅಡಿಯಲ್ಲಿ ಅಭಿವೃದ್ಧಿ ಪಡಿಸಿದ ಜಮೀನಿನ ಪೈಕಿ ಶೇಕಡಾ 50 ರಷ್ಟು ನಿವೇಶನಗಳನ್ನು ಸಂಬಂಧಪಟ್ಟ ಭೂ ಮಾಲೀಕರಿಗೆ ನೀಡಲಾಗುವುದು.
ಈ ಯೋಜನೆಯಲ್ಲಿ ಆಸಕ್ತಿ ಇರುವ ಭೂ ಮಾಲೀಕರು ತಮ್ಮ ಜಮೀನಿನ ದಾಖಲೆಯೊಂದಿಗೆ ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರ ಕಛೇರಿಯನ್ನು ಸಂಪರ್ಕಿಸುವಂತೆ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ತಿಳಿಸಿದ್ದಾರೆ.
Be the first to comment