ರಾಜ್ಯ ಸುದ್ದಿಗಳು
ಬೆಂಗಳೂರು
ಮಾರಕ ಕೊರೊನಾ ಸೋಂಕಿನಿಂದಾಗಿ ರಾಜ್ಯದಲ್ಲಿ ಸಾವಿರಾರು ಜನರು ಮೃತಪಟ್ಟಿದ್ದಾರೆ. ಕೊರೊನಾದಿಂದ ಮೃತಪಟ್ಟವರ ಕುಟುಂಬಸ್ಥರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ಕೊರೊನಾದಿಂದ ಮೃತಪಟ್ಟವರ ಕುಟುಂಬಸ್ಥರಿಗೆ ಒಂದೂವರೆ ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದುಸಚಿವಆರ್.ಅಶೋಕ್ತಿಳಿಸಿದ್ದಾರೆ.ವಿಧಾನಸೌಧದಲ್ಲಿ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್ ಅವರು ‘ಕೊರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ಕಂದಾಯ ಇಲಾಖೆ ವಿಪತ್ತು ನಿರ್ವಹಣಾ ನಿಧಿಯಿಂದ ಪರಿಹಾರ ಕೊಡಲಿದೆ. ರಾಜ್ಯ ಸರ್ಕಾರದಿಂದ 1 ಲಕ್ಷ ಕೊಡುತ್ತೇವೆ ಮತ್ತು ಕೇಂದ್ರ ಸರ್ಕಾರದಿಂದ 50 ಸಾವಿರ ಕೊಡುತ್ತಾರೆ. ಬಿಪಿಎಲ್ ಕಾರ್ಡ್ ಇರುವವರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಸೇರಿ ಒಟ್ಟು 1.5 ಲಕ್ಷ ರೂ. ಪರಿಹಾರ ದೊರೆಯಲಿದೆ’ ಎಂದು ತಿಳಿಸಿದ್ದಾರೆ.
ನಿನ್ನೆ ಈ ಬಗ್ಗೆ ಪರಿಶೀಲನಾ ಸಭೆ ನಡೆಸಿ ಆದೇಶ ಹೊರಡಿಸಿದ್ದೇವೆ. ಪರಿಹಅರ ಪಡೆಯಲು ಕೋವಿಡ್ ರೋಗಿಯ ಪಾಡಿಟಿವ್ ವರದಿಯ ಪಿ-ನಂಬರ್, ಮೃತ ವ್ಯಕ್ತಿಯ ಮರಣ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಮೃತ ವ್ಯಕ್ತಿಯ ಬಿಪಿಎಲ್ ಗುರುತಿನ ಚೀಟಿ ಹಾಗೂ ಅರ್ಜಿದಾರರ ಬ್ಯಾಂಕ್ ಅಕೌಂಟ್ ವಿವರವನ್ನು ನೀಡಬೇಕು. ಅರ್ಜಿದಾರರು ಸ್ವಯಂ ಘೋಷಣಾ ಫಾರ್ಮ್ 9 ರೊಂದಿಗೆ ದಾಖಲೆಗಳನ್ನು ಜಿಲ್ಲಾಧಿಕಾರಿ ಅಥವಾ ತಹಶೀಲ್ದಾರ್ ಅವರಿಗೆ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರದಿಂದ ಬರುವ ಪರಿಹಾರ ಹಣ RTGS ಮೂಲಕ ಅಕೌಂಟ್ ಗೆ ಹೋಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ಪರಿಹಾರ ನೀಡಲು ಸಮಿತಿ ಸಚಿಸಲಾಗಿದೆ. ಸಮಿತಿಯಲ್ಲಿ ಜಿಲ್ಲಾಧಿಕಾರಿಗಳು, ವೈದ್ಯಾಧಿಕಾರಿಗಳು, ಸದಸ್ಯ ಕಾರ್ಯದರ್ಶಿ, ವಲಯ ಜಂಟಿ ಆಯುಕ್ತರು ಇರುತ್ತಾರೆ. ಆರೋಗ್ಯ ಇಲಾಖೆಯಿಂದ ದಾಖಲೆಗಳನ್ನು ಪರಿಶೀಲಿಸಿ ಪರಿಹಾರ ಬಿಡುಗಡೆ ಮಾಡಲಾಗುತ್ತದೆ ಎಂದು ಅಶೋಕ್ ತಿಳಿಸಿದ್ದಾರೆ.
Be the first to comment