ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಸಪ್ತಾಹ,ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

ವರದಿ ಹರೀಶ್ ದೊಡ್ಡಬಳ್ಳಾಪುರ

ರಾಜ್ಯ ಸುದ್ದಿಗಳು 

ದೊಡ್ಡಬಳ್ಳಾಪುರ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಹಸನಘಟ್ಟ ಗ್ರಾಮದಲ್ಲಿ ಪ್ರಧಾನ ಮಂತ್ರಿ ನರೇಂದ್ರಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಸಪ್ತಾಹ ಹಾಗೂ ಪಂಡಿತ್ ದೀನದಯಾಳ್ ಉಪಾಧ್ಯಾಯ ರವರ ಹುಟ್ಟುಹಬ್ಬದ ಪ್ರಯುಕ್ತ ತಾಲ್ಲೂಕಿನ ವಿವಿಧ ಭಾಗಗಳ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಬಿಜೆಪಿ ತಾಲ್ಲೂಕು ಮಹಿಳಾ ಮೋರ್ಚಾ ಘಟಕದ ವತಿಯಿಂದ ಪ್ರತಿಭಾಪುರಸ್ಕಾರ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದಲ್ಲಿ ರಾಷ್ಟ್ರ ಪ್ರಧಾನ ಮಂತ್ರಿಗಳಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಪತ್ರಗಳ ಮುಖಾಂತರ ತಿಳಿಸುವ ಕಾರ್ಯ ವಿಶೇಷವಾಗಿತ್ತು. ದೊಡ್ಡಬಳ್ಳಾಪುರ ತಾಲೂಕಿನ ಎಲ್ಲಾ ಬಿಜೆಪಿ ಕಾರ್ಯಕರ್ತರು ಹಾಗೂ ನೆರೆದಿದ್ದ ಎಲ್ಲ ವಿದ್ಯಾರ್ಥಿನಿಯರು ಸ್ಥಳೀಯ ಸಾರ್ವಜನಿಕರು ಸಹ ಪತ್ರ ಬರೆದು ಪ್ರಧಾನಮಂತ್ರಿ ಮೋದಿಯವರಿಗೆ ಪತ್ರ ಕಳಿಸುವ ಕಾರ್ಯಕ್ಕೆ ಮುಂದಾದರು.ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕಿನ ಬಿಜೆಪಿ ಅಧ್ಯಕ್ಷರಾದ ನಾಗರಾಜುರವರು ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಂಡಿದ್ದು ಮುಂದಿನ ದಿನಗಳಲ್ಲಿ ಇವರು ದೇಶದ ಆಸ್ತಿಯಾಗಲಿ ಎಂದು ಆಶಿಸಿದರು

CHETAN KENDULI

 ಕಾರ್ಯಕ್ರಮದ ಆಯೋಜಕರಾದ ಲೀಲಾವತಿ ರವರು ಮಾತನಾಡಿ ಗ್ರಾಮೀಣ ಭಾಗದಲ್ಲಿ ಬಿಜೆಪಿ ಸರ್ಕಾರವು ಗ್ರಾಮೀಣ ಭಾಗದ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಸ್ಥಳೀಯ ಮಹಿಳೆಯರಿಂದ ಒಳ್ಳೆಯ ಸ್ಪಂದನೆ ಸಿಗುತ್ತಿದ್ದು ಈ ರೀತಿಯ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಹಾಯಕಾರಿಯಾಗಿದೆ ಎಂದು ತಿಳಿಸಿದರು

 ಕಾರ್ಯಕ್ರಮದಲ್ಲಿ ಬಿಜೆಪಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಕಾರ್ಯದರ್ಶಿಯಾದ ರಾಮಕೃಷ್ಣಯ್ಯ, ತಾಲೂಕಿನ ಅಧ್ಯಕ್ಷರಾದ ನಾಗರಾಜು,ಬಿ ಜೆ ಪಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಮಹಿಳಾ ಕಾರ್ಯದರ್ಶಿ ಗಿರಿಜಾ, ತಾಲೂಕು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಲೀಲಾವತಿ, ಕಾರ್ಯದರ್ಶಿಗಳಾದ ಅನ್ನಪೂರ್ಣ ಹಾಗೂ ರೋಹಿಣಿ ಹಾಗೂ ತಾಲ್ಲೂಕಿನ ಎಲ್ಲಾ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು

Be the first to comment

Leave a Reply

Your email address will not be published.


*