ರಾಜ್ಯ ಸುದ್ದಿಗಳು
ದೇವನಹಳ್ಳಿ
ಸರಕಾರಿ ವಿವಿಧ ಇಲಾಖೆಗಳ ಯೋಜನೆಗಳ ಸವಲತ್ತುಗಳು ಪ್ರತಿ ಅರ್ಹ ಫಲಾನುಭವಿಗಳ ಕೈಸೇರುವಂತಾಗಬೇಕು ಎಂದು ಕೊಯಿರ ಗ್ರಾಪಂ ಅಧ್ಯಕ್ಷೆ ವಿ.ರಮ್ಯ ತಿಳಿಸಿದರು.ದೇವನಹಳ್ಳಿ ತಾಲೂಕಿನ ಕೊಯಿರ ಗ್ರಾಪಂಯಲ್ಲಿ ಹಮ್ಮಿಕೊಂಡಿದ್ದ ಮೊದಲ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಈಗಾಗಲೇ ಕುಡಿಯುವ ನೀರು ಮತ್ತು ನೈರ್ಮಲ್ಯ, ತೋಟಗಾರಿಕಾ, ಕೃಷಿ, ರೇಷ್ಮೆ, ಅರಣ್ಯ, ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ ಇಲಾಖೆ, ಕಂದಾಯ ಸೇರಿದಂತೆ ಪಶುಸಂಗೋಪನೆ ಇಲಾಖೆಗಳಲ್ಲಿ ಸಿಗುವಂತಹ ಯೋಜನೆಗಳ ಬಗ್ಗೆ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡುತ್ತಿದ್ದಾರೆ. ಸಂಬಂಧಪಟ್ಟ ಅರ್ಹ ಫಲಾನುಭವಿಗಳು ಇದರ ಸದ್ಬಳಕೆ ಮಾಡಿಕೊಳ್ಳಬೇಕು. ಸರಕಾರಿ ಇಲಾಖೆಗಳಲ್ಲಿನ ವಿವಿಧ ಯೋಜನೆಗಳಲ್ಲಿ ಸಬ್ಸಿಡಿಯೂ ಸಹ ಇರುವುದರಿಂದ ಸಾಕಷ್ಟು ಅನುಕೂಲವಾಗಲು ಸಹಕಾರಿಯಾಗುವುದರ ಜೊತೆಗೆ ಆರ್ಥಿಕವಾಗಿ ಸದೃಢರಾಗಲು ಹೆಚ್ಚಿನ ಸಹಕಾರಿಯಾಗುತ್ತದೆ. ಪ್ರತಿಯೊಬ್ಬರು ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದು ಸಲಹೆ ಮಾಡಿದರು.ಇದೇ ಸಂದರ್ಭದಲ್ಲಿ ವಿವಿಧ ಸರಕಾರಿ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಇದುವರೆಗೂ ಅರ್ಹ ಫಲಾನುಭವಿಗಳು ಪಡೆದ ಅಂಕಿಅಂಶ ಮತ್ತು ಇರುವ ಯೋಜನೆಗಳ ಸೌಲಭ್ಯಗಳನ್ನು ಸಭೆಯಲ್ಲಿ ಮಾಹಿತಿ ನೀಡಿದರು.
ಈ ವೇಳೆಯಲ್ಲಿ ಗ್ರಾಪಂ ಉಪಾಧ್ಯಕ್ಷ ವಿಜಯ್‌ಕುಮಾರ್, ಸದಸ್ಯರಾದ ಎಸ್.ವೀಣಾರವಿಕುಮಾರ್, ಮಮತಾಶಿವಾಜಿ, ನಯನಆನಂದ್, ಆಂಜಿನಮ್ಮ, ಬಿಂದು, ಆನಂದ್.ಎಸ್.ಸಿ, ಸುಧಾಶ್ರೀನಿವಾಸ್, ಮುನಿಆಂಜಿನಪ್ಪ, ಜಗದೀಶ್, ಮುನೀಂದ್ರ, ವಿವಿಧ ಇಲಾಖೆಗಳ ಅಧಿಕಾರಿ ವರ್ಗ, ಶಾಲಾ ಮುಖ್ಯೋಪಾದ್ಯಾಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಪ್ರಭಾರ ಪಿಡಿಒ ಪದ್ಮಮ್ಮ, ಕಾರ್ಯದರ್ಶಿ ಆದೇಪ್ಪ, ಗ್ರಾಪಂ ಸಿಬ್ಬಂದಿ, ಗ್ರಾಮಸ್ಥರು ಇದ್ದರು.
Be the first to comment