ಜಿಲ್ಲಾ ಸುದ್ದಿಗಳು
ಕಾರವಾರ
ಉತ್ತರಕನ್ನಡ ಜಿಲ್ಲೆಯ ಸಂಸದರಾದ ಅನಂತಕುಮಾರ ಹೆಗಡೆಯವರ ಅವರ ಸತತ ಪ್ರಯತ್ನದಿಂದಾಗಿ ಉತ್ತರ ಕನ್ನಡ ಜಿಲ್ಲೆಗೆ ಎರಡು ಇಎಸ್‌ಐ ಆಸ್ಪತ್ರೆ ಮಂಜೂರಾಗಿದೆ.
ಉತ್ತರ ಕನ್ನಡ ಜಿಲ್ಲೆಗೆ ಇಎಸ್‌ಐ ಆಸ್ಪತ್ರೆಗಳನ್ನು ಮಂಜೂರು ಮಾಡುವಂತೆ ಕೇಂದ್ರ ಕಾರ್ಮಿಕ ಸಚಿವರಲ್ಲಿ ಸಂಸದರಾದ ಅನಂತ ಕುಮಾರ್ ಹೆಗಡೆ ಯವರು ವಿನಂತಿಸಿದ್ದರು. ಅದರಂತೆ ಶಿರಸಿ ಮತ್ತು ಕುಮಟಾದಲ್ಲಿ ಹೊಸ ಎರಡು ವೈದ್ಯ ಇಎಸ್‌ಐ ಚಿಕಿತ್ಸಾಲಯಗಳನ್ನು ಸ್ಥಾಪಿಸಲು ತಾತ್ವಿಕವಾಗಿ ಅನುಮೋದನೆ ನೀಡಲಾಗಿದೆ.
ಕೇಂದ್ರ ಕಾರ್ಮಿಕ ಸಚಿವರಾದ ಭೂಪೇಂದ್ರ ಯಾದವ್ ಸಂಸದರಿಗೆ ಪತ್ರದ ಮೂಲಕ ಈ ವಿಷಯ ತಿಳಿಸಿದ್ದಾರೆ.
Be the first to comment