ಸ್ವಚ್ಛತೆಯ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಮೂಡಿಸುವ ಕೆಲಸವಾಗಬೇಕು ಅ.೨ ಗಾಂಧಿಜಯಂತಿ, ಲಾಲ್‌ಬಹದ್ದೂರ್ ಶಾಸ್ತ್ರೀ ಜಯಂತಿಯ ಅಂಗವಾಗಿ ಶ್ರಮದಾನಕ್ಕೆ ಚಾಲನೆ

ವರದಿ: ಹೈದರ್ ಸಾಬ್, ಕುಂದಾಣ

ರಾಜ್ಯ ಸುದ್ದಿಗಳು 

ದೇವನಹಳ್ಳಿ

ವಿಶೇಷವಾಗಿ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ ಇವೆಲ್ಲ ಸೇರಿ ಸ್ವಚ್ಛತೆಯ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ನಾಗಲಂಬಿಕಾದೇವಿ ತಿಳಿಸಿದರು.ದೇವನಹಳ್ಳಿ ತಾಲೂಕಿನ ಕುಂದಾಣ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಗಾಂಧಿಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇಡೀ ರಾಜ್ಯದ ಎಲ್ಲಾ ವಸತಿ ಶಾಲೆಗಳಲ್ಲಿ, ಎಲ್ಲಾ ಕಚೇರಿಗಳಲ್ಲಿ ಮಕ್ಕಳು ಮತ್ತು ಸಿಬ್ಬಂದಿ ಸೇರಿದಂತೆ ಅಧಿಕಾರಿಗಳ ವರ್ಗವೂ ಜೊತೆಗೂಡಿ ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾಗಲಾಗಿದೆ ಎಂದರು.

CHETAN KENDULI

ಮುನ್ನಚ್ಚರಿಕೆ ಕ್ರಮ: ಕೊರೊನಾ ೩ನೇ ಅಲೆ ಬೀತಿ ಹಿನ್ನಲೆಯಲ್ಲಿ ತಜ್ಞರ ಸೂಚನೆಯಂತೆ, ಶಾಲೆಯಲ್ಲಿ ಸರಕಾರದ ಆದೇಶದಂತೆ ೬ನೇ ತರಗತಿಯಿಂದ ಕಡಿಮೆ ಇರುವ ಮಕ್ಕಳನ್ನು ಕರೆದುಕೊಂಡು ಬಂದಿದಲ್ಲ. ಉಳಿದಂತೆ ಎಲ್ಲಾ ಮುನ್ನಚ್ಚರಿಕಾ ಕ್ರಮಗಳಾದ ಸಾಮಾಜಿಕ ಅಂತರ, ಸ್ಯಾನಿಟೈಸರ್ ಕಡ್ಡಾಯಗೊಳಿಸಲಾಗಿದ್ದು, ಉತ್ತಮ ಪರಿಸರ ಇರುವುದರಿಂದ ಮಕ್ಕಳಿಗೆ ಮತ್ತು ಸಿಬ್ಬಂದಿಗಳಿಗೆ ಸೋಂಕು ಹರಡದಂತೆ ಎಲ್ಲಾ ರೀತಿಯ ಮುನ್ನಚ್ಚರಿಕಾ ಕ್ರಮಗಳನ್ನು ಅನುಸರಿಸಲು ಸೂಚನೆ ನೀಡಲಾಗಿದೆ. ಅದನ್ನು ರಾಜ್ಯದ ಪ್ರತಿ ಶಾಲೆಯಲ್ಲಿ ಪಾಲನೆಯಾಗುತ್ತಿದೆ ಎಂದರು. ರಾಜ್ಯದಲ್ಲಿ ಒಟ್ಟು ೮೨೬ ಮೊರಾರ್ಜಿ ದೇಸಾಯಿ ಶಾಲೆಗಳಿದ್ದು, ಪ್ರತಿ ಶಾಲೆಯಲ್ಲಿ ಶೇ.೯೦-೯೮ರಷ್ಟು ಅತ್ಯುತ್ತಮ ಶ್ರೇಣಿಯನ್ನು ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಕ್ರೈಸ್‌ಶಾಲೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಕುಂದಾಣ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಕಾಂಪೌಂಡ್ ಮತ್ತು ನೀರಿನ ವ್ಯವಸ್ಥೆ ಕಲ್ಪಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಶಾಲಾವರಣದಲ್ಲಿ ಸಸಿ ನೆಡಲಾಯಿತು. ಶಾಲಾ ಮಕ್ಕಳು ಮತ್ತು ಆಡಳಿತ ಮಂಡಳಿ ಸೇರಿದಂತೆ ಕುಂದಾಣ ಗ್ರಾಪಂ ಚುನಾಯಿತ ಜನಪ್ರತಿನಿಧಿಗಳು, ಅಧಿಕಾರಿ ವರ್ಗ, ಸಿಬ್ಬಂದಿಗಳು ಶ್ರಮದಾನದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. 

#ಕುಂದಾಣ ಮೊರಾರ್ಜಿ ದೇಸಾಯಿ ಆವರಣ, ಶಾಲಾ ಕೊಠಡಿ, ಭೋಜನಾಲಯ, ಮಕ್ಕಳ ವಸತಿ ನಿಲಯಗಳನ್ನು ಪರಿಶೀಲಿಸಲಾಯಿತು. ಸ್ವಚ್ಛತೆ ಮತ್ತು ಆಗಬೇಕಿರುವ ಕಾಮಗಾರಿಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಆದಷ್ಟು ಬೇಗ ಪರಿಹರಿಸುವಂತೆ ಸೂಚನೆ ನೀಡಲಾಯಿತು.# 

ಈ ವೇಳೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಆಯುಕ್ತ ರವಿಕುಮಾರ್ ಸುರಪುರ್, ಜಿಲ್ಲಾ ಉಪನಿರ್ದೇಶಕ ರಾಜಶೇಖರ್, ಕುಂದಾಣ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ವೆಂಕಟೇಶ್, ದೈಶಿಶಿ ಯಲ್ಲಪ್ಪ. ಗ್ರಾಪಂ ಅಧ್ಯಕ್ಷ ವಿ.ನಾರಾಯಣಸ್ವಾಮಿ, ಸದಸ್ಯರು, ಶಾಲಾ ಆಡಳಿತ ಮಂಡಳಿ, ಶಿಕ್ಷಕರು, ಸಿಬ್ಬಂದಿ ಮತ್ತು ಮಕ್ಕಳು ಇದ್ದರು. 

Be the first to comment

Leave a Reply

Your email address will not be published.


*