ಜಿಲ್ಲಾ ಸುದ್ದಿಗಳು
ಕಾರವಾರ
ಉತ್ತರಕನ್ನಡ ಜಿಲ್ಲೆಯ ರವೀಂದ್ರನಾಥ ಟ್ಯಾಗೋರ್ ಕಡಲತೀರಕ್ಕೆ ಖುದ್ದು ಎಸ್ಪಿ, ಅಧಿಕಾರಿಗಳು, ಹಾಗೂ ಜನಪ್ರತಿನಿಧಿಗಳು ಸೇರಿದಂತೆ ನೂರಾರು ಮಂದಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ 153ನೇ ಜನ್ಮ ದಿನಾಚರಣೆ ಅಂಗವಾಗಿ ಸ್ಥಳಕ್ಕೆ ಭೇಟಿ ನೀಡಿ ಸ್ವಚ್ಛಗೊಳಿಸುವ ಕಾರ್ಯ ನಡೆಸಿದರು.ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ನಿತಿನ್ ಪಿಕಳೆ ಸೇರಿದಂತೆ ಸದಸ್ಯರು, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗ ಎಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.
ನಗರಸಭೆ ವತಿಯಿಂದ ಆಯೋಜಿಸಿದ್ದ ಗಾಂಧಿ ಜಯಂತಿ ಹಾಗೂ ಸ್ವಚ್ಛತಾ ಕಾರ್ಯಕ್ರಮಕ್ಕೆ ನಗರಸಭೆ ಉದ್ಯಾನವನದಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಚಾಲನೆ ನೀಡಿದರು. ಸ್ವಚ್ಛತಾ ಕಾರ್ಯಕ್ಕೆ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಎನ್ಸಿಸಿ, ಪೊಲೀಸರು, ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಸಹಕಾರ ನೀಡಿದರು. ನಂತರ ಟ್ಯಾಗೋರ್ ಕಡಲ ತೀರದುದ್ದಕ್ಕೂ ಬಿದ್ದಿದ್ದ ಪ್ಲಾಸ್ಟಿಕ್ ಬಾಟಲ್, ಚೀಲ, ಬಟ್ಟೆ, ಬಲೆ ಸೇರಿದಂತೆ ಇನ್ನಿತರ ತ್ಯಾಜ್ಯಗಳನ್ನು ಆಯ್ದು ಸ್ವಚ್ಛಗೊಳಿಸಿದ್ದಾರೆ.
Be the first to comment