ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಒತ್ತಾಯ

ವರದಿ: ಹೈದರ್ ಸಾಬ್, ಕುಂದಾಣ

ರಾಜ್ಯ ಸುದ್ದಿಗಳು 

ದೇವನಹಳ್ಳಿ

ದೇವನಹಳ್ಳಿ ತಾಲೂಕಿನ ಶಿಕ್ಷಕರು ಪಟ್ಟಣದ ಗುರುಭವನದಲ್ಲಿ ಗಾಂಧಿ ಜಯಂತಿ ಮತ್ತು ಪತ್ರ ಚಳುವಳಿಯನ್ನು ಹಮ್ಮಿಕೊಂಡಿದ್ದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಮಾತನಾಡಿ ಪ್ರಾಥಮಿಕ ಶಾಲಾ ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕಾಗಿ ತಿಳಿಸಿದರು.ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಲು ಎಲ್ಲಾ ರೀತಿಯ ಹೋರಾಟಗಳಿಗೆ ಬೆಂಬಲ ನೀಡುವುದಾಗಿ ಘೋಷಿಸಿದರು.

CHETAN KENDULI

ಶಾಲಾ ಶಿಕ್ಷಕರ ಸಂಘದ ಖಜಾಂಚಿ ಯತೀಶ್ ಕುಮಾರ್ ಮಾತನಾಡಿ, ನಾವೆಲ್ಲಾ ಒಗ್ಗಟ್ಟಿನಿಂದ ಹೋರಾಟ ಮಾಡಿದರೆ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬಹುದು ಎಂದು ಗಮನಕ್ಕೆ ತಂದರು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ನಾರಾಯಣ, ಉಪಾಧ್ಯಕ್ಷೆ ಭಾಗ್ಯಲಕ್ಷ್ಮಿ, ಸಹಕಾರ್ಯದರ್ಶಿ ಚಾಯ್ಸ್, ಹರೀಶ್.ಕೆ, ಉಮಾಶಂಕರ್, ಹಾಗೂ ಶಿಕ್ಷಕರಾದ ಮುತ್ತುರಾಜ್, ಶಿವರಾಜು, ವೆಂಕಟೇಶ್, ಚೆನ್ನಾರೆಡ್ಡಿ, ರವಿಚಂದ್ರನ್ ತಿಪ್ಪೇಸ್ವಾಮಿ ಮತ್ತಿತರರು ಇದ್ದರು

Be the first to comment

Leave a Reply

Your email address will not be published.


*