ಜಿಲ್ಲಾ ಸುದ್ದಿಗಳು
ಭಟ್ಕಳ
ತಾಲೂಕಿನ ಮಿನಿ ವಿಧಾನಸೌಧದ ಎರಡನೇ ಮಹಡಿಯಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕಾ ಸೇವಾ ಸಮಿತಿ, ಭಟ್ಕಳ ವಕೀಲ ಸಂಘದ ಸಂಯುಕ್ತ ಆಶ್ರಯದಲ್ಲಿ ಗಾಂಧೀ ಜಯಂತಿ ಪ್ರಯುಕ್ತ ಕಾನೂನು ಅರಿವು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಮಹಾತ್ಮ ಗಾಂಧೀ ಜಯಂತಿಯ ಪ್ರಯುಕ್ತ ಭಟ್ಕಳ ತಾಲೂಕಾ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಜಗದೀಸ ಶಿವಪೂಜೆ ಅವರು ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ನಮ್ಮ ಜೀವನದಲ್ಲಿ ಪ್ರತಿಯೊಂದು ಸಂದರ್ಭದಲ್ಲಿ ಕಾನೂನು ಅತ್ಯಗತ್ಯ. ಎರಡು ವರ್ಷಗಳಿಂದ ಕೇಂದ್ರ ಸರಕಾರವು ಕಾನೂನಿನ ಅರಿವು ಮೂಡಿಸಲು ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ನಾವು ರಾಷ್ಟ್ರೀಯ ಕಾನೂನು ಪ್ರಾಧಿಕಾರದ ನೆರವಿನೊಂದಿಗೆ ಇಂದಿನಿಂದ ನವೆಂಬರ್ 14 ವರೆಗೂ ಕಾನೂನಿನ ಅರಿವನ್ನು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದೇವೆ. ಕಾನೂನಿನ ಅರಿವು ಪ್ರತಿಯುಬ್ಬರಿಗೂ ಅತ್ಯಗತ್ಯ. ಈ ಕಾನೂನಿನ ಅರಿವು ನೆರವು ಕಾರ್ಯಕ್ರಮವನ್ನು ಪ್ರತಿಯೊಬ್ಬರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜೆಎಮ್ ಎಫ್ ಸಿ ಭಟ್ಕಳ ಪ್ರಧಾನ ಹಿರಿಯ ನ್ಯಾಯಾದೀಸರಾದ ಪವಾಜ್ ಪಿಎ ಅವರು ಮಾತನಾಡಿ ನಾವು ಇಂದಿನಿಂದ ನವೆಂಬರ್ 14 ವರೆಗೆ ಹಮ್ಮಿಕೊಂಡಿರುವ ಕಾನೂನಿನ ಅಭಿಯಾನಕ್ಕೆ ಪ್ರತಿಯೊಬ್ಬರು ಸಹಕಾರವನ್ನು ನೀಡುತ್ತಿದ್ದಾರೆ. ಇದಕ್ಕೆ ನಾವು ಧನ್ಯವಾದವನ್ನು ಅರ್ಪಿಸುತ್ತಿದ್ದೇವೆ. ಪ್ರತಿಯೊಬ್ಬರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿದೆ ಎಂದು ಹೇಳಿದರು.ತಾಲೂಕಾ ಸಹಾಯಕ ಆಯುಕ್ತರಾದ ಮಮತಾ ದೇವಿ ಮಾತನಾಡಿ ನಮಗೆ ಜೀವನದ ಪ್ರತಿಯೊಂದು ಘಟ್ಟದಲ್ಲೂ ಕಾನೂನಿನ ಅಗತ್ಯ ಕಂಡು ಬರುತ್ತದೆ. ಚಿಕ್ಕಂದಿನಿಂದ ದೊಡ್ಡವರಾಗುವ ವರೆಗೂ ಕಾನೂನಿನ ಬಗ್ಗೆ ತಿಳಿದುಕೊಳ್ಳುತ್ತಲೇ ಬರುತ್ತೇವೆ. ಇಂದು ಹಮ್ಮಿಕೊಂಡಿರುವ ಕಾನೂನಿನ ಅರಿವು ನೆರವು ಕಾರ್ಯಕ್ರಮ ಶ್ಲಾಘನೀಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ವಕೀಲ ಸಂಘದ ಅಧ್ಯಕ್ಷರಾದ ಎಮ್ ಎಲ್ ನಾಯ್ಕ, ತಾಲೂಕಾ ತಹಶೀಲ್ದಾರರಾದ ರವಿಚಂದ್ರ, ಡಿವೈಎಸ್ ಪಿ ಬೆಳ್ಳಿಯಪ್ಪ, ಪ್ರಧಾನ ಸಹಾಯಕ ಸರಕಾರಿ ಅಭಿಯೋಜಕರಾದ ವಿವೇಕ ನಾಯ್ಕ, ಹೆಚ್ಚುವರಿ ಸಹಾಯಕ ಸರಕಾರಿ ಅಭಿಯೋಜಕರಾದ ಸೇಖರ ಹರಿಕಾಂತ, ಶಿರಾಲಿ ಸರಕಾರಿ ಆಸ್ಪತ್ರೆಯ ವೈಧ್ಯಾಧಿಕಾರಿ ಡಾ. ಮೆಸ್ತಾ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
Be the first to comment