ಜಿಲ್ಲಾ ಸುದ್ದಿಗಳು
ಹೊನ್ನಾವರ
ಉತ್ತರ ಕನ್ನಡ ಜಿಲ್ಲೆಯ ಆರ್ಯ ಈಡಿಗ ( ಬಿಲ್ಲವ) ನಾಮಧಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘ ತಾಲೂಕು ಶಾಖೆ ಹೊನ್ನಾವರ ವತಿಯಿಂದ ನೆರವೇರಿದ “ಶೈಕ್ಷಣಿಕ ನಿಧಿ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ” ಕಾರ್ಯಕ್ರಮ ನೆರವೇರಿತು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಪಟ್ಟಣದ ಹೊನ್ನಾವರದ ನಾಮಧಾರಿ ವಿದ್ಯಾರ್ಥಿ ನಿಲಯದ ಸಭಾಭವನದಲ್ಲಿ ನಡೆಯಿತು. ಶಿಕ್ಷಣದಲ್ಲಿ ಸಾಧನೆಗೈದ 10 ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ಸಂಘದ ವತಿಯಿಂದ ನೀಡಲಾಯಿತು.
ಕಾರ್ಯಕ್ರಮದಲ್ಲಿ ದೀಪ ಬೆಳಗುವ ಮೂಲಕ ಶಾಸಕರಾದ ಸುನೀಲ್ ನಾಯ್ಕರವರು ಚಾಲನೆ ನೀಡಿದರು. ನಂತರ ಮಾತನಾಡಿ ಸಮಾಜದ ಪ್ರತಿಭೆಗಳನ್ನು ಗುರುತಿಸಿ ಗೌರವಿಸುವುದು ಜಿಲ್ಲೆಗೆ ಮಾದರಿ ಕಾರ್ಯಕ್ರಮವಾಗಿದೆ. ಶೈಕ್ಷಣಿಕವಾಗಿ ಹಾಗೂ ಇತರ ರಂಗಗಳಲ್ಲಿ ಹಲವು ಪ್ರತಿಭೆಗಳಿದ್ದರೂ ಅವರನ್ನು ಗುರುತಿಸಲು ನಾವು ಎಡವುತ್ತಿದ್ದೇವೆ. ಆದರೆ ಸಮಾಜದ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನದ ಜೊತೆಗೆ ಸಮಾಜಕ್ಕೆ ಪರಿಚಯಿಸಿದರೆ ಮುಂದೆ ಇತರರಿಗೆ ಸಾಧನೆ ಮಾಡಲು ಪ್ರೇರಣೆಯಾಗುತ್ತದೆ. ಸರ್ಕಾರ ಮತ್ತು ಜನಪ್ರತಿನಿಧಿಗಳು ಮಾಡುವ ಕೆಲಸ ಶೈಕ್ಷಣಿಕ ನಿಧಿಯನ್ನು ಸಂಘಟನೆ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ಗಾಗಿ ಸಾಧನೆ ಮಾಡಬೇಡಿ , ಸಮಾಜಕ್ಕೆ ಕೊಡುಗೆ ನೀಡುವ ಮನೋಭಾವದಿಂದ ಸಾಧನೆ ಮಾಡಿ ಎಂದು ಕರೆ ನೀಡಿದರು. ವೈಯಕ್ತಿಕವಾಗಿ 50000 ರೂಪಾಯಿಯನ್ನು ಬಡ ಮಕ್ಕಳ ಶಿಕ್ಷಣಕ್ಕಾಗಿ ಸಂಘದ ಪದಾಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಹೇಳಿದರು.
ಎಸ್ ಎಸ್ ಸಂಘವು ಬಡ ಮಕ್ಕಳ ಶಿಕ್ಷಣಕ್ಕಾಗಿ ಶೈಕ್ಷಣಿಕ ನಿಧಿಯನ್ನು ಹೊಂದಿಸುವ ವಿಶೇಷ ಪ್ರಯತ್ನವನ್ನು ಪ್ರಾರಂಭಿಸಿದೆ. ಎಸ್ ಎಸ್ ಸಮಾಜದ 10 ವಿದ್ಯಾರ್ಥಿಗಳಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ನೌಕರರ ಸಂಘದ ಅಧ್ಯಕ್ಷ ಜಿ ಎಚ್ ನಾಯ್ಕ, ನಾಮಧಾರಿ ಸಂಘದ ಅಧ್ಯಕ್ಷ ಮಂಜುನಾಥ ನಾಯ್ಕ, ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಎಮ್ ಎಸ್ ನಾಯ್ಕ, ಶೈಕ್ಷಣಿಕ ನಿಧಿ ಸಮಿತಿ ಅಧ್ಯಕ್ಷ ಕಿಶೋರ್ ನಾಯ್ಕ, ನೌಕರರ ಸಂಘದ ಅಧ್ಯಕ್ಷ ಆರ್ ಟಿ ನಾಯ್ಕ, ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ್ ನಾಯ್ಕ, ಸಾಹಿತಿಗಳಾದ ವಿನಾಯಕ ನಾಯ್ಕ, ಸಮಾಜದ ಮುಖಂಡ ವಾಮನ ನಾಯ್ಕ, ಉಪಸ್ತಿತರಿದ್ದರು.
Be the first to comment