ಜಿಲ್ಲಾ ಸುದ್ದಿಗಳು
ಕಾರವಾರ
ರವೀಂದ್ರನಾಥ್ ಕಡಲ ತೀರಕ್ಕೆ ಹುಬ್ಬಳ್ಳಿಯಿಂದ ಪ್ರವಾಸಕ್ಕೆ ಆಗಮಿಸಿದ್ದ 13 ಮಂದಿ ಪೈಕಿ ಒಂದೇ ಕುಟುಂಬದ 4 ಮಕ್ಕಳು ಸೇರಿ ಒಟ್ಟು 6 ಮಕ್ಕಳು ವಾಟರ್ ಸ್ಪೋರ್ಟ್ಸ್ ಮುಗಿಸಿಕೊಂಡು ಕಡಲ ತೀರದಲ್ಲಿ ಆಟವಾಡುತ್ತಿದ್ದರು ಈ ವೇಳೆ ವಾಟರ್ ಸ್ಪೋರ್ಟ್ಸ್ ಸಿಬ್ಬಂದಿ ಪಾಲಕರಿಗೆ ಮಕ್ಕಳನ್ನು ನೀರಿನಲ್ಲಿ ಮುಂದೆ ಹೋಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದರು. ಆದರೂ ಮಕ್ಕಳು ಆಟವಾಡುತ್ತ ಮುಂದೆ ಸಾಗಿದ್ದು, ಒಮ್ಮೆಲೇ ಬಂದ ಅಲೆಯಿಂದ ಎಲ್ಲರೂ ಕೊಚ್ಚಿ ಹೋಗಿದ್ದಾರೆ.
ಪ್ರವಾಸಕ್ಕೆ ಬಂದು ಸಮುದ್ರ ಪಾಲಾಗುತ್ತಿದ್ದ 6 ಮಕ್ಕಳನ್ನು ಲೈಫ್ ಗಾರ್ಡ್ ಹಾಗೂ ಟೂರಿಸ್ಟ್ ಮಿತ್ರ ಸಿಬ್ಬಂದಿ ಇಂದು ರಕ್ಷಿಸಿದ್ದಾರೆ. ಇಲ್ಲಿನ ರವೀಂದ್ರನಾಥ ಠಾಗೋರ್ ಕಡಲ ತೀರದಲ್ಲಿ ಈ ಘಟನೆ ನಡೆದಿದೆ.
ತಕ್ಷಣ ಕುಟುಂಬಸ್ಥರು ಕೂಗಿಕೊಂಡಿದ್ದಾರೆ. ಬಳಿಕ ರಕ್ಷಣೆಗೆ ಧಾವಿಸಿದ ಲೈಫ್‌ಗಾರ್ಡ್, ಟೂರಿಸ್ಟ್ ಮಿತ್ರ ಸಿಬ್ಬಂದಿ 6 ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಮಕ್ಕಳು ನೀರು ಕುಡಿದಿದ್ದರಿಂದ ಪ್ರಜ್ಞೆ ತಪ್ಪಿದ್ದರು. ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದರಿಂದ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Be the first to comment