ಉತ್ತರ ಕನ್ನಡ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ ಪಡೆದ ಗೀತಾ ಶಿರೂರು ಅವರಿಗೆ ಸನ್ಮಾನ…!

ವರದಿ: ಜೀವೋತ್ತಮ್ ಪೈ ಭಟ್ಕಳ್

ಜಿಲ್ಲಾ ಸುದ್ದಿಗಳು 

ಭಟ್ಕಳ:

CHETAN KENDULI

ಪ್ರಸಕ್ತವಾಗಿ ಖಾಸಗಿ ಶಾಲೆಗಳು ಮಾತ್ರವಲ್ಲ, ಸರಕಾರಿ ಶಾಲೆಯಲ್ಲಿಯೂ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗುತ್ತಿದೆ ಎಂದು ಮಾಜಿ ಶಾಸಕ ಜೆ.ಡಿ.ನಾಯ್ಕ ಹೇಳಿದರು.

ಅವರು ಭಟ್ಕಳ ತಾಲೂಕಿನ ಮೂಡಭಟ್ಕಳ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಗೀತಾ ಶಿರೂರು ಅವರಿಗೆ ಅಭಿನಂದನೆ ಹಾಗೂ ಗುರುವಂದನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕೃತೆ ಗೀತಾ ಶಿರೂರು ಮಾತನಾಡಿ, ತಮಗೆ ಬಂದ ಪ್ರಶಸ್ತಿ ಶಾಲೆಯ ಮಕ್ಕಳಿಗೆ ಅರ್ಪಿಸುತ್ತಿದ್ದೇನೆ, ಪ್ರಶಸ್ತಿಯು ಹೆಚ್ಚಿನ ಜವಾಬ್ದಾರಿಯನ್ನು ನೀಡಿದೆ ಎಂದರು.

ಭಟ್ಕಳ ನಿಚ್ಚಲಮಕ್ಕಿ ಶ್ರೀ ವೆಂಕಟ್ರಮಣ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಕೃಷ್ಣ ನಾಯ್ಕ ಆಸರಕೇರಿ ಮಾತನಾಡಿ, ಸರಕಾರಿ ಶಾಲೆ ಉತ್ತಮ ಗುಣಮಟ್ಟದ ಶಿಕ್ಷಕರನ್ನು ಹೊಂದಿದ್ದು, ಖಾಸಗಿ ಶಾಲೆಗಳ ಕಡೆಗೆ ಪಾಲಕರು ಆಸಕ್ತರಾಗುವುದಕ್ಕೆ ಕಾರಣವೇ ಇಲ್ಲ ಎಂದರು.

ವೇದಿಕೆಯಲ್ಲಿ ಮುಟ್ಟಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷ ಶೇಷಗಿರಿ ನಾಯ್ಕ, ಸದಸ್ಯೆ ಲಕ್ಷ್ಮೀ ನಾಯ್ಕ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ವೆಂಕಟೇಶ ನಾಯ್ಕ, ರಾಮಾ ಬಳೆಗಾರ, ವೆಂಕಟೇಶ ದೇವಡಿಗ, ಶಿಕ್ಷಕ ಗಣಪತಿ ಶಿರೂರು ಮೊದಲಾದವರು ಉಪಸ್ಥಿತರಿದ್ದರು. ಸಿಆರ್‌ಪಿ ರಾಘವೇಂದ್ರ ಅಡಿಗ ಎಲ್ಲರನ್ನೂ ಸ್ವಾಗತಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ರಾಜೇಶ್ವರಿ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಪ್ರತಿಭಾ ಕರ್ಕಿಕರ ಕಾರ್ಯಕ್ರಮ ನಿರೂಪಿಸಿದರು.

Be the first to comment

Leave a Reply

Your email address will not be published.


*