ಮಹರ್ಷಿ ವಾಲ್ಮೀಕಿ ಜಯಂತಿ ಸರಳ ಆಚರಣೆಗೆ ನಿರ್ಧಾರ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ :ಜಿಲ್ಲೆಯಲ್ಲಿ ಅಕ್ಟೋಬರ 20 ರಂದು ಆಚರಿಸಲ್ಪಡುವ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ ಸಭಾಭವನದಲ್ಲಿಂದು ಜರುಗಿದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕುರಿತು ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೋವಿಡ್ ಹಿನ್ನಲೆಯಲ್ಲಿ ಸರಕಾರದ ನಿಯಮಗಳ ಪ್ರಕಾರ ಸರಳವಾಗಿ ಆಚರಿಸಲಾಗುತ್ತಿದೆ. ಅಕ್ಟೋಬರ 20 ರಂದು ಜಿಲ್ಲಾಡಳಿತ ಭವನದಲ್ಲಿರುವ ಆಡಿಟೋರಿಯಂ ಹಾಲ್‍ನಲ್ಲಿ ಕಾರ್ಯಕ್ರಮ ಆಯೋಜಿಸಲು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅಧಿಕಾರಿ, ಸಿಬ್ಬಂದಿ ಹಾಗೂ ಸಮಾಜ ಬಾಂಧವರು ಕಡ್ಡಾಯವಾಗಿ ಮಾಸ್ಕ ಧರಿಸಿಕೊಂಡು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮಹರ್ಷಿ ವಾಲ್ಮೀಕಿಯವರ ಕುರಿತು ಉಪನ್ಯಾಸ ನೀಡಲು ಉತ್ತಮ ಉಪನ್ಯಾಸಕರನ್ನು ಆಹ್ವಾನಿಸುವಂತೆ ತಿಳಿಸಿದರು. ಸರಕಾರ ನಿಯಮಾವಳಿಗಳನ್ನು ಸಡಿಲಗೊಳಿಸಿದಲ್ಲಿ ಕಾರ್ಯಕ್ರಮದ ರೂಪುರೇಷೆ ಬದಲಾವಣೆ ಮಾಡಲಾಗುವುದೆಂದು ತಿಳಿಸಿದರು.

ತಾಲೂಕಾ ಮಟ್ಟದಲ್ಲಿ ಹಾಗೂ ಶಾಲಾ ಕಾಲೇಜುಗಳಲ್ಲಿ ವಾಲ್ಮೀಕಿ ಜಯಂತಿ ಆಚರಿಸುವಂತೆ ನಿರ್ದೇಶನ ನೀಡಲು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ಎನ್.ಹೇಮಾವತಿ ಸೇರಿದಂತೆ ಸಮಾಜದ ಮುಖಂಡರಾದ ಶಂಬುಗೌಡ ಪಾಟೀಲ, ರಾಜು ನಾಯ್ಕರ, ದ್ಯಾಮಣ್ಣ ಗಾಳಿ, ನಿಂಗಪ್ಪ ಕ್ಯಾದಿಗ್ಗೇರಿ, ಹನಮಂತ ಡೋಣಿ, ಪಾಂಡು ಪೊಲೀಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*