ಪ್ರತಿಯೊಬ್ಬರೂ ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಳ್ಳಬೇಕು…!

ವರದಿ: ಹೈದರ್ ಸಾಬ್, ಕುಂದಾಣ

ಜಿಲ್ಲಾ ಸುದ್ದಿಗಳು 

ದೇವನಹಳ್ಳಿ:

CHETAN KENDULI

ಮುಂಬರುವ ಜಿ.ಪಂ., ತಾಪಂ. ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಬೇಕು ಎಂದು ಪೌರಾಡಳಿತ ಹಾಗೂ ಸಣ್ಣಕೈಗಾರಿಕೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.

ಪಟ್ಟಣದ ಪ್ರವಾಸಿಮಂದಿರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಸೇವೆ ಮತ್ತು ಸಮರ್ಪಣಾ ಅಭಿಯಾನ ಅಂಗವಾಗಿ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾರಾಯಣಸ್ವಾಮಿ ನೇತೃತ್ವದಲ್ಲಿ ಅಭಿವೃದ್ದಿ ಪೌಂಡೇಶನ್‌ನ ಅಂಗವಿಕಲರಿಗೆ ಮಂಚ ವಿತರಿಸಿ ಮಾತನಾಡಿದರು. ಜಿಲ್ಲಾಧ್ಯಕ್ಷ ಎ.ವಿ.ನಾರಾಯಣಸ್ವಾಮಿಯವರ ಸಮ್ಮುಖದಲ್ಲಿ ಅಂಗವಿಕಲರಿಗೆ ಅನುಕೂಲವಾಗಲು 45ಮಂಚಗಳನ್ನು ಕೊಡಿಸಿದ್ದಾರೆ. ರಾಷ್ಟಾçಧ್ಯಕ್ಷ ಜೆ.ಪಿ.ನಡ್ಡ ಹಾಗೂ ರಾಜ್ಯಾಧ್ಯಕ್ಷ ನಳೀನ್ ಕಟೀಲು ಅವರ ಆದೇಶದಂತೆ ಸೆ.17ರಿಂದ ಅ.7ರವರೆಗೆ ಸೇವೆ ಮತ್ತು ಸಮರ್ಪಣಾ ದಿನವನ್ನು ಆಚರಿಸಲಾಗಿದೆ. ಪ್ರತಿದಿನವೂ ಒಂದೊಂದು ಕಾರ್ಯಕ್ರಮಗಳನ್ನು ಮಾಡಿಕೊಂಡು ಬರಲಾಗಿದೆ. ಪ್ರಧಾನಿ ನರೇಂದ್ರಮೋದಿ ರಾಷ್ಟçದಲ್ಲಿ ಉತ್ತಮ ಯೋಜನೆಗಳನ್ನು ರೂಪಿಸಿದ್ದಾರೆ. ಪ್ರತಿಯೊಬ್ಬರೂ ಸೇವಾ ಮನೋಭಾವನೆಯಿಂದ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ಸರ್ಕಾರ ಅಂಗವಿಕಲರಿಗೆ ಉತ್ತಮ ಕಾರ್ಯಕ್ರಮಗಳನ್ನು ರೂಪಿಸಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಉತ್ತಮ ಆಡಳಿತವನ್ನು ನೀಡುತ್ತಿದ್ದಾರೆ. ಪಕ್ಷವನ್ನು ಸಂಘಟನೆಯನ್ನು ಮಾಡಬೇಕು. ಸಮಾಜದಲ್ಲಿ ಬಡವರು ಮತ್ತು ಅಂಗವಿಕಲರಿಗೆ ತಮ್ಮ ಕೈಲಾದ ಸೇವೆಯನ್ನು ಮಾಡಬೇಕು. ಸಾಮಾಜಿಕ ಚಟುವಟಿಕೆಗಳನ್ನು ಮಾಡಿದಾಗ ಪ್ರತಿ ಜನರಿಗೆ ಅನುಕೂಲವಾಗುತ್ತದೆ. ಇದರ ಪ್ರತಿಫಲ ತಮ್ಮ ಕುಟುಂಬಗಳಿಗೆ ಅನುಕೂಲವಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ ಮಾತನಾಡಿ ಸೇವೆ ಮತ್ತು ಸಮರ್ಪಣಾ ದಿನವನ್ನು ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಮಾಡಲಾಗಿದೆ. ಪ್ರತಿ ದಿನವೂ ಒಂದೊAದು ಕಾರ್ಯಕ್ರಮಗಳನ್ನು ಮಾಡಲಾಗಿದೆ ದೇವನಹಳ್ಳಿಯ ಅಭಿವೃದ್ದಿ ಪೌಂಡೇಶನ್ ನಲ್ಲಿರುವ ಅಂಗವಿಕಲರಿಗೆ ಅತ್ಯವಶ್ಯಕವಾಗಿದ್ದ ಮಂಚಗಳನ್ನು ಕೊಡಿಸಲಾಗಿದೆ. ಮತ್ತಿತರರು ಇದ್ದರು.

Be the first to comment

Leave a Reply

Your email address will not be published.


*