ಉಪ ಚುನಾವಣೆಯಲ್ಲಿ ಅನರ್ಹ ಶಾಸಕರು ಸ್ಪರ್ಧಿಸಲು ಸಾಧ್ಯವಿಲ್ಲ: ಸಂಜೀವ್‌ ಕುಮಾರ್‌

ವರದಿ: ಅಮರೇಶ ಕಾಮನ ಕಿರಿ


  ರಾಜಕೀಯ ಸುದ್ದಿಗಳು


ಶಾಸಕರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ತೆರವಾಗಿರುವ 17 ವಿಧಾನಸಭಾ ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಾಗಿದೆ.

 
vijaya karnataka

ಸಂಜೀವ್‌ ಕುಮಾರ್‌
ಬೆಂಗಳೂರು: ರಾಜ್ಯ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಲ್ಲಿ ಉಪ ಚುನಾವಣೆಘೋಷಣೆಯಾಗಿದ್ದು ಇಂದಿನಿಂದಲೇ ಮಾದರಿ ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ಮಧ್ಯಾಹ್ನ ಸುದ್ದಿಗೋಷ್ಠಿಯಲ್ಲಿ ಸಂಜೀವ್‌ ಕುಮಾರ್‌ ಹಲವು ಮಾಹಿತಿ ನೀಡಿದರು.
ಅನರ್ಹ ಶಾಸಕರು ‌ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. 15 ಕ್ಷೇತ್ರಗಳಲ್ಲಿ ಇಂದಿನಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ‌ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಅನರ್ಹ ಶಾಸಕರ ಸ್ಪರ್ಧೆಗೆ ಅವಕಾಶ ಇಲ್ಲ. ಸ್ಪೀಕರ್ ರೂಲಿಂಗ್‌ಗೆ ಬದ್ಧ ಎಂದು ಸಂಜೀವ್‌ ಕುಮಾರ್‌ ತಿಳಿಸಿದರು.

ಚುನಾವಣೆ ನಡೆಯುವ ಕ್ಷೇತ್ರ ವ್ಯಾಪ್ತಿ ಇಡೀ ಜಿಲ್ಲೆಗಳಿಗೆ ನೀತಿ ಸಂಹಿತೆ ಅನ್ವಯವಾಗಲಿದೆ. ಮಸ್ಕಿ, ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚುನಾವಣೆ ತಕರಾರು ಅರ್ಜಿ ಇರುವ ಕಾರಣ ಉಪ ಚುನಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ನೆರೆ ಪರಿಹಾರಕ್ಕೆ ಅಡ್ಡಿ ಇಲ್ಲ ಆದರೆ, ರಾಜಕೀಯ ನಾಯಕರ ಪಾತ್ರ ಇರುವಂತಿಲ್ಲ ಎಂದು ಸಂಜೀವ್‌ ಕುಮಾರ್‌ ಸೂಚನೆ ನೀಡಿದರು.

Be the first to comment

Leave a Reply

Your email address will not be published.


*