ಸರ್ವಶಕ್ತ್ಯಾತ್ಮಕ ಶ್ರೀ ಚೌಡೇಶ್ವರಿ ದೇವಿಗೆ ಶರನ್ನವರಾತ್ರಿ ಪೂಜಾ ಮಹೋತ್ಸವ…! #_ಗಂಧದ ಅಲಂಕಾರದೊಂದಿಗೆ ಭಕ್ತಾದಿಗಳ ಗಮನಸೆಳೆದ ಚೌಡೇಶ್ವರಿ ದೇವಿ_#

ವರದಿ: ಹೈದರ್ ಸಾಬ್, ಕುಂದಾಣ

ಜಿಲ್ಲಾ ಸುದ್ದಿಗಳು

ದೇವನಹಳ್ಳಿ:

CHETAN KENDULI

ಪಟ್ಟಣದ ಸರೋವರ ಬೀದಿಯಲ್ಲಿರುವ ಸರ್ವಶಕ್ತ್ಯಾತ್ಮಕ ಶ್ರೀ ಚೌಡೇಶ್ವರಿ ದೇಗುಲದಲ್ಲಿ ಶರನ್ನವರಾತ್ರಿ ಪ್ರಯುಕ್ತ ಪೂಜಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ.


 


ಅಕ್ಟೋಬರ್ 7ರ ಗುರುವಾರದಿಂದ ಅಕ್ಟೋಬರ್ 15 ಶುಕ್ರವಾರದವರೆಗೆ ದೇವಿಗೆ ವಿಶೇಷ ಅಲಂಕಾರ ಪೂಜಾ ಕೈಂಕರ್ಯಗಳನ್ನು ಪ್ರತಿವರ್ಷದಂತೆ ಈ ವರ್ಷವೂ ಸಹ ನೆರವೇರಿಸಲಾಗುತ್ತದೆ. ಒಂಬತ್ತು ದಿನ ವಿಶೇಷವಾಗಿ ದೇವಿಗೆ ವಿವಿಧ ಅಲಂಕಾರ, ಮಂಗಳಾರತಿ, ವಿಶೇಷ ಪೂಜೆ, ಪ್ರಸಾದ ವಿನಿಯೋಗ ಸೇರಿದಂತೆ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಂಡು ಶ್ರೀ ಚಾಮುಂಡೇಶ್ವರಿ ದೇವಿಗೆ ಇಂದು ಗಂಧದ ಅಲಂಕಾರ ಮಾಡಲಾಗಿತ್ತು. ಭಕ್ತಾದಿಗಳು ದೇವಿಯ ದರ್ಶನ ಪಡೆದು ಪುನೀತರಾದರು.

ದೇವಾಲಯ ಟ್ರಸ್ಟ್ ನ ಕಾರ್ಯದರ್ಶಿ ಗಂಗಾಧರ್ ಮಾತನಾಡಿ, ಕೊರೋನಾ ಸಾಂಕ್ರಾಮಿಕ ರೋಗ ಹರಡುವ ಹಿನ್ನೆಲೆಯಲ್ಲಿ ಯಾವುದೇ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿರಲಿಲ್ಲ, ಇದೀಗ ದಾನಿಗಳ, ಸೇವಾ ಕಾರ್ಯಕರ್ತರ ಸಹಕಾರದಲ್ಲಿ ನವರಾತ್ರಿ ವಿಶೇಷವಾಗಿ ದೇವಿಗೆ ವಿಶೇಷವಾಗಿ ಪೂಜೆ ನೆರವೇರಿಸಲಾಗುತ್ತದೆ. ಬರುವ ಭಕ್ತಾದಿಗಳು ಮಾಸ್ಕ್ ಮತ್ತು ಸ್ಯಾನಿಟೈಸರ್ ಕಡ್ಡಾಯವಾಗಿ ಬಳಸುವಂತೆ ದೇವಾಲಯದಿಂದ ವಿಶೇಷ ಸೂಚನೆ ನೀಡಲಾಗಿದ್ದು ಮುಂಜಾಗೃತಾ ಕ್ರಮಗಳನ್ನು ಅನುಸರಿಸಿ ಪೂಜೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಕ್ಟೋಬರ್ 15ರ ಶುಕ್ರವಾರ ವಿಜಯದಶಮಿ ಅಂಗವಾಗಿ ಚಾಮುಂಡೇಶ್ವರಿ ಅಲಂಕಾರ ಮಾಡಲಾಗುತ್ತಿದ್ದು, ನೂತನವಾಗಿ ಚಿನ್ನಲೇಪಿತ ಅಮ್ಮನವರ ಉತ್ಸವ ಮೂರ್ತಿಯನ್ನು ಪಟ್ಟಣದ ವಿವಿಧ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ನಂತರ ಉಯ್ಯಾಲೋತ್ಸವ ನೆರವೇರಿಸಲಾಗುತ್ತದೆ ಎಂದರು.

ನಿವೃತ್ತ ಶಿಕ್ಷಕ ಶ್ರೀರಾಮಯ್ಯ ಮಾತನಾಡಿ, ಭಕ್ತಾದಿಗಳ ಇಷ್ಟಾರ್ಥಗಳನ್ನು ದೇವಿ ಈಡೇರಿಸುತ್ತಾ ಬಂದಿದ್ದಾಳೆ. ಅದರಂತೆ ಭಕ್ತಾದಿಗಳು ದೇವಿಗೆ ವಿಶೇಷ ಪೂಜೆ ಸಂದರ್ಭದಲ್ಲಿ ದೇವಿಯ ದರ್ಶನ ಪಡೆದು ಪುನೀತರಾಗುತ್ತಾರೆ. ಚಾಮುಂಡೇಶ್ವರಿ ತಾಯಿ ಎಲ್ಲರಿಗೂ ಸುಖ ಸಂತೋಷ ನೆಮ್ಮದಿಯ ಬದುಕು ನಡೆಸುವಂತೆ ಮಾಡಲಿ ಎಂದು ಪ್ರಾರ್ಥಿಸುತ್ತೇವೆ ಎಂದರು.

ಇದೇ ಸಂದರ್ಭದಲ್ಲಿ ದೇವಾಲಯ ಆಡಳಿತ ಮಂಡಳಿ ಪದಾಧಿಕಾರಿಗಳು, ಭಕ್ತಾದಿಗಳು, ಸೇವಾ ಕಾರ್ಯಕರ್ತರು ಇದ್ದರು.

Be the first to comment

Leave a Reply

Your email address will not be published.


*