ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಿಕೊಳ್ಳಲು ಅಕ್ಟೋಬರ್ 31 ರವರೆಗೆ ಅವಕಾಶ 

ವರದಿ: ಸುಚಿತ್ರಾ ನಾಯ್ಕ, ಹೊನ್ನಾವರ

ಜಿಲ್ಲಾ ಸುದ್ದಿಗಳು 

ಕಾರವಾರ:

CHETAN KENDULI

ಇ-ಕೆವೈಸಿ ಮಾಡಿಸಿಕೊಳ್ಳದ ಪಡಿತರ ಚೀಟಿದಾರರಿಗೆ ಅಕ್ಟೋಬರ್ 31 ಅಂತಿಮ ದಿನವಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ಧೇಶಕ ಮಂಜುನಾಥ್ ರೇವಣ್ಕರ್ ರವರು ತಿಳಿಸಿದ್ದಾರೆ. 

ನ್ಯಾಯಬೆಲೆ ಅಂಗಡಿಗಳಲ್ಲಿ ಈಗಾಗಲೇ ಇ-ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು ಹೊರತುಪಡಿಸಿ ಇನ್ನುಳಿದ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.

ಮುಂದಿನ ದಿನಗಳಲ್ಲಿ ಇ-ಕೆವೈಸಿ ಮಾಡದ ಪಡಿತರ ಚೀಟಿದಾರರ ಪಡಿತರವನ್ನು ತಡೆಹಿಡಿಯಬಹುದಾಗಿದೆ ಇ-ಕೆವೈಸಿ ಸಂಗ್ರಹಣೆಗೆ ಯಾರಾದರೂ ಹಣ ಕೇಳಿದರೆ ಅಥವಾ ದೂರುಗಳಿದ್ದಲ್ಲಿ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕಾ ತಹಶೀಲ್ದಾರ್ ಹಾಗೂ ಉಪನಿರ್ಧೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.

Be the first to comment

Leave a Reply

Your email address will not be published.


*