ಜಿಲ್ಲಾ ಸುದ್ದಿಗಳು
ಬಾಗಲಕೋಟೆ : ಪ್ರಾದೇಶಿಕ ಅರಣ್ಯ ವಿಭಾಗದ ವತಿಯಿಂದ ವನ್ಯಜೀವಿ ಸಪ್ತಾಹ ಅಂಗವಾಗಿ ಹಮ್ಮಿಕೊಂಡ 100 ಕಿ.ಮೀ ಸೈಕಲ್ ಜಾಥಾಕ್ಕೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿ.ಪಂ ಸಿಇಓ ಟಿ.ಭೂಬಾಲನ್ ಹಾಗೂ ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಉಪಾಧ್ಯಕ್ಷ ಬಸವರಾಜ ಅವರಾದಿ, ಜಿ.ಪಂ ಉಪಕಾರ್ಯದರ್ಶಿ ಅಮರೇಶ ನಾಯಕ ಸೇರಿ ಜಂಟಿಯಾಗಿ ಏಕಕಾಲಕ್ಕೆ ಹಸಿವು ನಿಶಾಣೆ ತೋರುವ ಮೂಲಕ ಚಾಲನೆ ನೀಡಿದರು.
ಜಿಲ್ಲಾಡಳಿತ ಭವನದ ಆವರಣದಿಂದ ಪ್ರಾರಂಭಗೊಂಡ ಸೈಕಲ್ ಜಾಥಾ ಕಾಳಿದಾಸ ವೃತ್ತ, ವಿದ್ಯಾಗಿರಿ ಕಾಲೇಜ ಸರ್ಕಲ್, ಗದ್ದನಕೇರಿ ಕ್ರಾಸ್, ಬೀಳಗಿ, ಯಡಹಳ್ಳಿ, ಹಲಗಲಿ, ಸುನಗ ಮಾರ್ಗವಾಗಿ ನಂತರ ಗದ್ದನಕೇರಿ ಕ್ರಾಸ್‍ನಲ್ಲಿರುವ ಅರಣ್ಯ ವಿಶ್ರಾಂತಿ ಗೃಹದಲ್ಲಿ ಮುಕ್ತಾಯಗೊಂಡಿತು. ಜಾಥಾ ಗ್ರಾಮದಲ್ಲಿ ತೆರಳಿದಾಗ ಆಯಾ ಗ್ರಾಮದ ಗ್ರಾ.ಪಂ ಅಧ್ಯಕ್ಷರು, ಉಪಾದ್ಯಕ್ಷರು ಹಾಗೂ ಸಾರ್ವಜನಿಕರು ಸ್ವಾಗತಿಸಿ, ಪ್ರೋತ್ಸಾಹಿಸಿದರು.
ಯಡಹಳ್ಳಿ ಗ್ರಾಮದಲ್ಲಿ ಜಿಲ್ಲೆಯ ವನ್ಯಜೀವಿ ಪರಿಪಾಲಕ ಡಾ.ಎಂ.ಆರ್.ದೇಸಾಯಿ ಜಾಥಾವನ್ನು ಉದ್ದೇಶಿಸಿ ಮಾತನಾಡಿದರು. ಹಲಗಲಿ ಗ್ರಾಮದಲ್ಲಿರುವ ಜಡಗ ಬಾಲ ಮೂರ್ತಿಗಳಿಗೆ ಮಾಲಾರ್ಪಣೆ ಮಾಡಿ ಗ್ರಾಮದ ಮುಖಂಡ ಸರನಾಯಕ, ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸಾರ್ವಜನಿಕರಿಗೆ ವನ್ಯಜೀವಿ ಸಂರಕ್ಷಣಗೆ ಕುರಿತು ಜಾಗೃತಿ ಮೂಡಿಸಿದರು. ನಂತರ ಗದ್ದನಕೇರಿ ಅರಣ್ಯ ವಿಶ್ರಾಂತಿ ಸಂಕಿರಣದಲ್ಲಿ ಜರುಗಿದ ವನ್ಯಜೀವಿ ಸಪ್ತಾಹ-2021ರ ಸಮಾರೋ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ವನ್ಯಜೀವಿ ಪರಿಪಾಲಕ ಡಾ.ಎಂ.ಆರ್.ದೇಸಾಯಿ ಮತ್ತು ಡಾ.ತಿಪ್ಪೆಸ್ವಾಮಿ ಅವರು ಸೈಕಲ್ ಜಾಥಾದಲ್ಲಿ ಪಾಲ್ಗೊಂಡವರಿಗೆ ಪ್ರಮಾಣಪತ್ರ ವಿತರಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ತಾಲೂಕು ಮಟ್ಟದಲ್ಲಿ ಏರ್ಪಡಿಸಿದ ಪ್ರಬಂಧ, ಚಿತ್ರಕಲೆ ಸ್ಪರ್ಧೆಯ ವಿಜೇತ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸೈಕಲ್ ಜಾಥಾದಲ್ಲಿ ಬಾಗಲಕೋಟೆ ಹವ್ಯಾಸಿ ಸೈಕಲ್ ತಂಡ, ನಗರದ ಸರ್ಕಾರಿ ಕ್ರೀಡಾ ಶಾಲೆಯ ವಿದ್ಯಾರ್ಥಿಗಳು, ಅರಣ್ಯ ಇಲಾಖೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
Be the first to comment