ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಪ್ರವೇಶಕ್ಕೆ ನೆಗೆಟಿವ್ ವರದಿ ಕಡ್ಡಾಯ..!!!

ವರದಿ: ಕುಮಾರ್ ನಾಯ್ಕ್, ಉಪ ಸಂಪಾದಕರು

ಜಿಲ್ಲಾ ಸುದ್ದಿಗಳು 

ಸುಬ್ರಹ್ಮಣ್ಯ:

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವರ ದರ್ಶನ ಹಾಗೂ ಸೇವೆಗಳನ್ನು ನೆರವೇರಿಸಲು ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯವಾಗಿದೆ. 2 ಡೋಸ್ ಲಸಿಕೆ ಪಡೆದವರಿಗೆ ಹಾಗೂ 72 ಗಂಟೆಗಳ ಮುಂಚಿತವಾಗಿ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿದ್ದರೆ ಮಾತ್ರ ಸೇವೆಗೆ ಅವಕಾಶ ಕಲ್ಪಿಸಲಾಗಿದೆ.

CHETAN KENDULI

ಪ್ರತಿದಿನ 1೦೦ ಭಕ್ತರಿಗೆ ಸರ್ಪಸಂಸ್ಕಾರ ಸೇವೆ, 25 ನಾಗಪ್ರತಿಷ್ಠೆ, 4 ಪಂಚಾಮೃತ ಮಹಾಭಿಷೇಕ ನೆರವೇರಿಸಲು ಅವಕಾಶ ಕಲ್ಪಿಸಲಾಗಿದೆ. ಇನ್ನು ಪ್ರತಿ ದಿನ 4ಪಾಳಿಯಲ್ಲಿ ಆಶ್ಲೇಷಾ ಬಲಿ ಸೇವೆ ನಡೆಯುತ್ತಿದ್ದು, ಒಂದು ಪಾಳಿಯಲ್ಲಿ 7೦ ಭಕ್ತರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಸೇವೆಗೆ ಪ್ರತಿ ರಸೀದಿಯಿಂದ 2 ಜನ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.

ಇನ್ನು ದೇಗುಲ ಮತ್ತು ಷಣ್ಮುಖ ಪ್ರಸಾದ ಭೋಜನ ಶಾಲೆಯನ್ನು ಪ್ರತಿದಿನ ತೊಳೆದು ಸ್ವಚ್ಚ ಮಾಡಿ ವೈರಾಣು ತಡೆ ಔಷಧ ಸಿಂಪಡಿಸಲಾಗುತ್ತಿದೆ. ಭಕ್ತರಿಗೆ ಸೂಕ್ತ ಮಾಹಿತಿಗಳನ್ನು ನೀಡಲು ಅಲ್ಲಲ್ಲಿ ಸೂಚನಾ ಫಲಕವನ್ನು ಅಳವಡಿಸಲಾಗಿದೆ.

ದೇಗುಲದಲ್ಲಿ ಲಸಿಕೆ ಕೇಂದ್ರ ಶ್ರೀ ದೇಗುಲದ ರಾಜಗೋಪುರದ ಬಳಿ ಲಸಿಕಾ ಕೇಂದ್ರವಲ್ಲದೇ ಆರ್‌ಟಿಪಿಸಿಆರ್ ಪರೀಕ್ಷಾ ಕೇಂದ್ರವನ್ನು ತೆರೆಯಲಾಗಿದೆ. ಭಕ್ತರು ಮತ್ತು ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳುತ್ತಿದ್ದಾರೆ. ದೇಗುಲದ ಎಲ್ಲ ಸಿಬಂದಿ ಎರಡು ಡೋಸ್ ಕೋವಿಡ್ ಲಸಿಕೆ ಪಡೆದುಕೊಂಡಿದ್ದು, ಆಗಾಗ್ಗೆ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ಅವರು ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*