ಕೆಮಿಕಲ್ ಟ್ಯಾಂಕರ್ ಸ್ಫೋಟ:  ಸುತ್ತಲಿನ ಬೆಟ್ಟಕ್ಕೂ ಆವರಿಸಿದ ಬೆಂಕಿ;  ಸ್ಥಳದಲ್ಲಿ ಆತಂಕದ ವಾತಾವರಣ

ವರದಿ-ಸುಚಿತ್ರಾ ನಾಯ್ಕ ಹೊನ್ನಾವರ

ಜಿಲ್ಲಾ ಸುದ್ದಿಗಳು 

ಯಲ್ಲಾಪುರ

ರಾಷ್ಟ್ರೀಯ ಹೆದ್ದಾರಿ ಆರ್ತಿಬೈಲ್ ಬಳಿ ಕೆಮಿಕಲ್ ತುಂಬಿದ ಲಾರಿಯೊಂದು ಸ್ಫೋಟಗೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸಲು ಹರಹಾಸ ಪಡುತ್ತಿದ್ದಾರೆ.ಸುತ್ತಮುತ್ತಲಿನ ಬೆಟ್ಟಕ್ಕೂ ಬೆಂಕಿ ಆವರಿಸಿದ್ದು, ಕೆಮಿಕಲ್ ನಿಂದಾಗಿಯೇ ಈ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.

CHETAN KENDULI

 

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೆಳ್ಳಂಬೆಳಿಗ್ಗೆ ಟ್ಯಾಂಕರ್ ವೊಂದು ಸ್ಫೋಟಗೊಂಡಿದ್ದು, ಜನರು ಆತಂಕಗೊoಡಿದ್ದಾರೆ. ಏನೋ ಸ್ಫೋಟವಾಯಿತು. ಕೂಡಲೇ ಬೆಂಕಿ ಆವರಿಸಿಕೊಂಡಿದ್ದು, ಆತಂಕದ ಸ್ಥಿತಿ ನಿರ್ಮಾಣವಾಗಿದೆ ಎಂದು. ಸುತ್ತಮುತ್ತಲಿನ ಬೆಟ್ಟಕ್ಕೂ ಬೆಂಕಿ ಆವರಿಸಿದ್ದು, ಕೆಮಿಕಲ್ ನಿಂದಾಗಿಯೇ ಈ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.ಬೆಳಿಗ್ಗೆ 5.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಯಲ್ಲಾಪುರ ತಾಲೂಕಿನ ಇಡಗುಂದಿ ಬಳಿ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡಿದೆ. 5.30ರಿಂದ 5.45ರ ನಡುವೆ ಅಂಕೋಲ ಭಾಗದ ಕಡೆ ತೆರಳುತ್ತಿದ್ದ ಟ್ಯಾಂಕರ್ ಚಾಲಕನ ನಿರ್ಲಕ್ಷದಿಂದ ಘಾಟಿಯಲ್ಲಿ ಪಲ್ಟಿಯಾಗಿ ಸ್ಫೋಟಗೊಂಡಿದೆ. ಈ ವೇಳೆ ಚಾಲಕನಿಗೆ ಅಲ್ಪ ಗಾಯವಾಗಿದ್ದು ತಕ್ಷಣದಲ್ಲಿ ಆತನನ್ನು ರಕ್ಷಣೆ ಮಾಡಲಾಗಿದೆ.

ಗ್ಯಾಸ್ ಟ್ಯಾಂಕರ್ ಸ್ಪೋಟದಿಂದಾಗಿ ಸುತ್ತಮುತ್ತ 400 ರಿಂದ 500 ಮೀಟರ್ ಬೆಂಕಿ ವ್ಯಾಪಿಸಿದೆ. ಮಾಹಿತಿ ತಿಳಿದ ಅಗ್ನಿ ಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಅಗಮಿಸಿದ್ದು, ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಸ್ಥಳದಲ್ಲಿ ಏನಾಗಿದೆ ಎನ್ನುವ ಮಾಹಿತಿ ದೊರೆಯದೆ ಅಧಿಕಾರಿಗಳು ಕಂಗಾಲಾಗಿದ್ದಾರೆ.ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾಗಿದ್ದು, ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಮಂಗಳೂರಿನಿAದ ಗುಜರಾತಿನ ಅಹಮದಾಬಾದ್ ಗೆ ತೆರಳುತ್ತಿತ್ತು. ಮಂಗಳೂರು ಓನ್ ಜಿಸಿಯಿಂದ ರಾಸಾಯನಿಕ ಸಾಗಿಸಲಾಗುತ್ತಿತ್ತು. ಪಲ್ಟಿಯಾದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ಭಾರೀ ಪ್ರಮಾಣದಲ್ಲಿ ಹೊತ್ತಿಕೊಂಡ ಬೆಂಕಿಯಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದ್ದು, ಎರಡೂ ಕಡೆ ವಾಹನಗಳು ಸಾಲುಗಟ್ಟಿ ನಿಂತಿವೆ.

ಈ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. ಸೋರಿಕೆಯಾದ ರಾಸಾಯನಿಕ ಅಕ್ಕಪಕ್ಕದ ಹಳ್ಳಕ್ಕೆ ಹರಿದಿರುವ ಸಾಧ್ಯತೆಯಿದ್ದು, ಅಪಾರ ಎದುರಾಗುವ ಆತಂಕ ಕಾಡುತ್ತಿದೆ. ಸ್ಥಳದಲ್ಲಿದ್ದ ಅಧಿಕಾರಿಗಳು ಯಾವ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಪರಿಶೀಲಿಸುತ್ತಿದ್ದಾರೆ. ಬೆಳಿಗ್ಗೆ 5.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ..

Be the first to comment

Leave a Reply

Your email address will not be published.


*