ಜಿಲ್ಲಾ ಸುದ್ದಿಗಳು
ಬಾಗಲಕೋಟೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2021-22 ನೇ ಸಾಲಿನ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 40 ವರ್ಷದೊಳಗಿದ್ದು 2 ವರ್ಷದೊಳಗಿನ ಬಾರ್ ಕೌನ್ಸಿಲ್ ಪ್ರವರ್ಗ 1 ಕ್ಕೆ ಸೇರಿರಬೇಕು. ಅರ್ಜಿ ನಮೂನೆ ಸೇರಿದಂತೆ ಅಗತ್ಯ ದಾಗಲಾತಿಳೊಂದಿಗೆ ನವೆಂಬರ್ 9 ರೊಳಗಾಗಿ ಜಿಲ್ಲಾಡಳಿತದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿಗಳ ಕಛೇರಿ ಇವರಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಮಯದಲ್ಲಿ ಇಲಾಖೆಯಲ್ಲಿ ಮಾಹಿತಿ ಪಡೆಯಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಂಜುನಾಥ ಡೊಂಬರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment