ಜಿಲ್ಲಾ ಸುದ್ದಿಗಳು
ಹೊನ್ನಾವರ
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಆಕಸ್ಮಿಕವಾಗಿ ಅಡಿಕೆ ಮರದಿಂದ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಕುಟುಂಬಕ್ಕೆ ಶಾಸಕರಾದ ಸುನೀಲ್ ನಾಯ್ಕರವರು ಸಹಾಯ ಸಹಕಾರ ನೀಡಿದ್ದಾರೆ. ಅವರ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರವಾಗಿ ನೀಡಿದ್ದಾರೆ.
ದಿನಾಂಕ 24.01.2021 ರಂದು ಕೃಷಿ ಕೆಲಸದಲ್ಲಿ ತೊಡಗಿದ್ದಾಗ ಹಡಿನಬಾಳ ದೊಡ್ಡಕಾವೂರು ನಿವಾಸಿ ಗಣಪತಿ ಜಟ್ಟಿ ನಾಯ್ಕ್ ಅವರು ಆಕಸ್ಮಿಕವಾಗಿ ಕಾಲು ಜಾರಿ ಅಡಿಕೆ ಮರದಿಂದ ಬಿದ್ದು ಸಾವನ್ನಪ್ಪಿದ್ದು ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರವನ್ನು ಒದಗಿಸಲಾಗಿದೆ. ಇಂದು ಆದೇಶ ಪ್ರತಿಯನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.
Be the first to comment