ರಾಜ್ಯ ಸುದ್ದಿಗಳು
ಬೆಂಗಳೂರು
ಐಎಎಸ್, ಐಪಿಎಸ್ ಅಧಿಕಾರಿಗಳು ಹಾಗೂ ಪ್ರಭಾವಿ ರಾಜಕಾರಣಿಗಳಿಗೆ ಹನಿಟ್ರ್ಯಾಪ್ ಬಲೆ ಬೀಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ, ರಾಷ್ಟ್ರೀಯ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಯುವತಿಯೋರ್ವಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.ವಿದ್ಯಾ ಎಂಬಾಕೆ ಬಂಧಿತ ಆರೋಪಿ. ಎಐಸಿಸಿ ಸದಸ್ಯೆ ಆಗಿರುವ ವಿದ್ಯಾ ತಮಿಳುನಾಡು ಕಾಂಗ್ರೆಸ್ ಉಸ್ತುವಾರಿ ಆಗಿದ್ದಾರೆ ಎನ್ನಲಾಗಿದೆ.
ಈಕೆ ಹಲವು ವರ್ಷಗಳಿಂದ ಇದೇ ದಂಧೆಯಲ್ಲಿ ತೊಡಗಿದ್ದಳು ಎಂದು ಪೊಲೀಸರ ತನಿಖೆ ವೇಳೆ ಬಯಲಾಗಿದೆ.ಈಕೆ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಂಡು ಖಾಸಗಿ ವಿಡಿಯೋ ಮಾಡಿಕೊಳ್ಳುತ್ತಿದ್ದಳು. ನಂತರ ಹಣಕ್ಕೆ ಬೇಡಿಕೆ ಇಡುತ್ತಿದ್ದಳು. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕಾರಣ ಈಕೆಗೆ ದೆಹಲಿ ನಾಯಕರವರೆಗೂ ಲಿಂಕ್ ಇತ್ತು ಎನ್ನಲಾಗಿದೆ.
ಇತ್ತೀಚೆಗೆ ನಗರದ ಸಿವಿಲ್ ಕಾಂಟ್ರಾಕ್ಟರ್ ಒಬ್ಬರಿಗೆ ಇದೇ ರೀತಿ ಈಕೆ ಮಾಡಿದ್ದಳು. ಈಕೆಯ ಕಾಟಕ್ಕೆ ಬೇಸತ್ತ ಕಾಂಟ್ರಾಕ್ಟರ್ ಕೊನೆಗೆ ಅನ್ನಪೂರ್ಣೇಶ್ವರಿ ನಗರದ ಪೊಲೀಸರಿಗೆ ದೂರು ನೀಡಿದ್ದರು.
Be the first to comment