ಜಿಲ್ಲಾ ಸುದ್ದಿಗಳು
ಬಾಗಲಕೋಟೆ : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿ ಅಕ್ಟೋಬರ 16 ರಂದು ತಾಲೂಕಿನ ಮಲ್ಲಾಪೂರ ಗ್ರಾಮದಲ್ಲಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆಯಿಂದಾಗಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ ಸರಕಾರ ಕೊವಿಡ್ ಪಾಜಿಟಿವ್ ಪ್ರಮಾಣ ಶೇ.1.5 ಗಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಗ್ರಾಮ ವಾಸ್ತಕ್ಕೆ ಅವಕಾಶ ಕಲ್ಪಿಸಲಾಗಿದೆ.
ಅಕ್ಟೋಬರ 16 ರಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಬಾಗಲಕೋಟೆ ತಾಲೂಕಿನ ಮಲ್ಲಾಪೂರ ಗ್ರಾಮದಲ್ಲಿ ಗ್ರಾಮವಾಸ್ತವ್ಯ ಮಾಡಿದರೆ. ಬಾದಾಮಿ ತಾಲೂಕಿನ ಹುಲ್ಲಿಕೇರಿ ಇನಾಂ, ಗುಳೇದಗುಡ್ಡ ತಾಲೂಕಿನ ತೋಗುಣಸಿ, ಹುನಗುಂದ ತಾಲೂಕಿನ ಬಸರಿಕಟ್ಟಿ, ಇಲಕಲ್ಲ ತಾಲೂಕಿನ ಸೋಮಲಾಪುರ, ಜಮಖಂಡಿ ತಾಲೂಕಿನ ಮದರಖಂಡಿ, ಮುಧೋಳ ತಾಲೂಕಿನ ಬುದ್ನಿ ಪಿ.ಎಂ, ಬೀಳಗಿ ತಾಲೂಕಿನ ಬಿಸನಾಳ ಹಾಗೂ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮಗಳಲ್ಲಿ ಆಯಾ ತಾಲೂಕಿನ ತಹಶಿಲ್ದಾರರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
Be the first to comment