ಜಿಲ್ಲಾ ಸುದ್ದಿಗಳು
ಕಾರವಾರ
ಈವರೆಗೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೇ ಇದ್ದ ಮತದಾರರಿಗೆ ಇದೊಂದು ಕೊನೆಯ ಅವಕಾಶವಾಗಿದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸದೇ ಇರುವವರು ತಮ್ಮ ಹೆಸರನ್ನು ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದಾಖಲಿಸಲು ಸಂಬoಧಪಟ್ಟ ತಾಲೂಕು ತಹಸೀಲ್ದಾರ್ ಕಚೇರಿಯಲ್ಲಿ ನವೆಂಬರ್ 06ರ ರವರೆಗೆ ಸಲ್ಲಿಸಲು ಅವಕಾಶವಿದೆ ಎಂದು ಹೇಳಿದರು.
ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ-2022 ಕ್ಕೆ ಸಂಬoಧಿಸಿದoತೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ಈಗ ಜಿಲ್ಲೆಯಾದ್ಯಂತ ನಡೆಯುತ್ತಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮತ್ತು ಹಕ್ಕು ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಲು ನವೆಂಬರ್ 6 ಕೊನೆಯ ದಿನ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಯನ್ನು ಸಂಬoಧಪಟ್ಟ ತಾಲೂಕು ತಹಸೀಲ್ದಾರ್ ಕಚೇರಿಯ ಚುನಾವಣಾ ಶಾಖೆಯಿಂದ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Be the first to comment