ರಾಜ್ಯ ಸುದ್ದಿಗಳು
ಸಿದ್ದಾಪುರ
ನಗರದಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿರುವ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಪೊಲೀಸ್ ವ್ಯವಸ್ಥೆ ಇದೆಯೋ? ಇಲ್ಲವೋ? ಎನ್ನುವ ಪ್ರಶ್ನೆ ಉದ್ಭವಿಸುತ್ತದೆ. ಇದಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಉತ್ತರ ನೀಡಬೇಕು ಎಂದು ಸಮಾಜವಾದಿ ಪಾರ್ಟಿಯ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾದ ಕೃಷ್ಣ ಎಚ್ ಬೆಳೆಗಾರರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಇತ್ತೀಚೆಗೆ ಸಿದ್ದಾಪುರ ತಾಲೂಕಿನ ಹಳ್ಳಿಯೊಂದರಲ್ಲಿ ದನದ ವ್ಯಾಪಾರಿಯ ಮೇಲೆ ಕೆಲವರು ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ಆ ದನದ ವ್ಯಾಪಾರಿಯನ್ನು ರಕ್ಷಿಸಿ ರಕ್ಷಣೆ ನೀಡಬೇಕಾದ ಪೊಲೀಸರು ಹಲ್ಲೆಗೊಳಗಾದ ವ್ಯಾಪಾರಿ ಮೇಲೆ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಆತನ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲಾ.
ಹಾಗಿದ್ದರೆ ಪೊಲೀಸರು ಜನಸಾಮಾನ್ಯರ ಮೇಲೆ ಹಲ್ಲೆ ನಡೆಸುವುದಕ್ಕೆ ಅನುಮತಿ ನೀಡಿದ್ದಾರೆಯೇ? ಇದಕ್ಕೆ ಪೊಲೀಸ್ ಅಧಿಕಾರಿಗಳು ಉತ್ತರ ನೀಡಬೇಕು. ಇಂತಹ ನೈತಿಕ ಪೊಲೀಸ್ ಗಿರಿಯನ್ನು ಸಮಾಜವಾದಿ ಪಾರ್ಟಿ ಖಂಡಿಸುತ್ತದೆ. ಇದು ಮುಂದಿನ ದಿನಗಳಲ್ಲಿ ಅಪಾಯದ ಸಂಕೇತವಾಗಿದೆ. ಈ ಮೂಲಕ ಜನಸಾಮಾನ್ಯರಿಗೆ ಪೊಲೀಸ್ ವ್ಯವಸ್ಥೆಯ ಮೇಲೆ ನಂಬಿಕೆ ಕಡಿಮೆಯಾಗುತ್ತದೆ ಮತ್ತು ಭಯ ಇಲ್ಲದಂತಾಗುತ್ತದೆ. ಈ ಮೂಲಕ ಜನಸಾಮಾನ್ಯರ ಮೇಲೆ ದೌರ್ಜನ್ಯಗಳು ಹೆಚ್ಚಾಗುವ ಸಂಭವ ಇದೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಜರುಗಿಸಿ ದನದ ವ್ಯಾಪಾರಸ್ಥನ ಮೇಲೆ ಹಲ್ಲೆ ನಡೆಸಿರುವಂತಹ ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.
Be the first to comment