ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಮುಖ್ಯಮಂತ್ರಿಗಳೇ? ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು ಬೀಡಿ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯ ಸುದ್ದಿಗಳು 

 ಉಡುಪಿ

ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದಿರಿ ಮುಖ್ಯಮಂತ್ರಿಗಳೇ?ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂವಸೆಯ ಧಿಕ್ಷೆ ಕೊಟ್ಟು ಬೀಡಿಅಲ್ಲಿಗೆ ನಿಮ್ಮ ಜಂಗಲ್ ರಾಜ್ ಸ್ಥಾಪನೆಯ‌ ಕನಸು ನನಸಾಗಬಹುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಒಂದೆಡೆ ಅಮಾಯಕ ಯುವಕ- ಯುವತಿಯರ ಮೇಲೆಅನೈತಿಕ‌ ಪೊಲೀಸ್‌ಗಿರಿಯ ದೌರ್ಜನ್ಯ….ಇನ್ನೊಂದೆಡೆ ಶಾಸಕರಿಂದಲೇ ಠಾಣೆಗೆ ನುಗ್ಗಿ ಆರೋಪಿಗಳ ಬಿಡುಗಡೆ…ಮತ್ತೊಂದೆಡೆ ಬಹಿರಂಗವಾಗಿ ತ್ರಿಶೂಲ ಹಂಚಿ ಹಿಂಸಾಚಾರಕ್ಕೆ ಕರೆ…. ಇದಕ್ಕೆಲ್ಲ ಮುಖ್ಯಮಂತ್ರಿಗಳ ಬಹಿರಂಗ ಬೆಂಬಲ.. ರಾಜ್ಯದಲ್ಲಿ ಸರ್ಕಾರ ಇದೆಯೇ?

ಗೂಂಡಾಗಿರಿಯನ್ನು ‘ಕ್ರಿಯೆಗೆ ಪ್ರತಿಕ್ರಿಯೆ’ ಎಂದು ಸಮರ್ಥಿಸಿದ ಮುಖ್ಯಮಂತ್ರಿಗಳು ಕರೆಗೆ ಓಗೊಟ್ಟು ಪೊಲೀಸರು ನೆಲದ ಕಾನೂನನ್ನು ಠಾಣೆಯೊಳಗೆ ಕೂಡಿ ಹಾಕಿ, ಕಾಡಿನ‌ ಕಾನೂನನ್ನು ಜಾರಿಗೆ ತರಲು ಬೀದಿಗಿಳಿದಂತಿದೆ.ನಾಡಿನ ಜನತೆ ತಮ್ಮ ಸುರಕ್ಷತೆಗಾಗಿ ಮನೆಯೊಳಗೆ ಇರುವುದು ಕ್ಷೇಮಕರ.

ಕರ್ನಾಟಕದ ಜನಪರವಾದ ಉತ್ತಮ ಆಡಳಿತಕ್ಕೆ ಒಂದು ಗೌರವದ ಪರಂಪರೆ ಇದೆ.ಇದು ಯೋಗಿ ಆದಿತ್ಯನಾಥ್ ಅವರ ಉತ್ತರಪ್ರದೇಶದ ಜಂಗಲ್ ರಾಜ್ ಅಲ್ಲ ಮುಖ್ಯಮಂತ್ರಿಗಳೇ.ಸಂವಿಧಾನಬದ್ಧವಾಗಿ ಆಡಳಿತ ನಡೆಸಲು ಸಾಧ್ಯವಾಗದಿದ್ದರೆ ದಯವಿಟ್ಟು ರಾಜೀನಾಮೆ ಕೊಟ್ಟು ಪ್ರಜಾಪ್ರಭುತ್ವ ಉಳಿಸಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Be the first to comment

Leave a Reply

Your email address will not be published.


*