ಜಿಲ್ಲಾ ಸುದ್ದಿಗಳು
ಕಾರವಾರ
ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ-2022 ಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಜಿಲ್ಲೆಯಾದ್ಯಂತ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಹಾಗೂ ಕರ್ನಾಟಕ ಪಶ್ಚಿಮ ಮತದಾರರ ನೋಂದಣಾಧಿಕಾರಿ ಮುಲೈ ಮುಗಿಲನ್ ತಿಳಿಸಿದ್ದಾರೆ.
ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ಹಕ್ಕು ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನ. 6 ರವರೆಗೆ ಇದೆ. ಈವರೆಗೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೇ ಇದ್ದ ಮತದಾರರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಇದುವರೆಗೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೇ ಇರುವವರು ತಮ್ಮ ಹೆಸರನ್ನು ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಮತದಾರರ ಪಟ್ಟಿಯಲ್ಲಿದಾಖಲಿಸಲು ಸಂಬಂಧಪಟ್ಟ ತಹಸೀಲ್ದಾರ ಅವರ ಕಚೇರಿಯಲ್ಲಿ ನವೆಂಬರ್ 6 ರವರೆಗೆ ಸಲ್ಲಿಸಲು ಅವಕಾಶವಿರುತ್ತದೆ. ಹೆಚ್ಚಿನ ಮಾಹಿತಿಯನ್ನು ಸಂಬಂಧಪಟ್ಟ ತಾಲೂಕಾ ತಹಶೀಲ್ದಾರ ಕಚೇರಿಯ ಚುನಾವಣೆ ಶಾಖೆಯಿಂದ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Be the first to comment