ಶೀಘ್ರ ಪಟ್ಟಣದ ಹೆದ್ದಾರಿ ರಸ್ತೆ ಡಾಂಬರೀಕರಣ ಮಾಡಲು ಶಾಸಕರಿಂದ ಒತ್ತಾಯ

ವರದಿ: ಹೈದರ್ ಸಾಬ್, ಕುಂದಾಣ

ರಾಜ್ಯ ಸುದ್ದಿಗಳು 

ದೇವನಹಳ್ಳಿ

ಮೂರು ಇಲಾಖೆಗಳ ಹಗ್ಗಜಗ್ಗಾಟದಿಂದ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ದೇವನಹಳ್ಳಿ ಪಟ್ಟಣದ ರಾಷ್ಟೀಯ ಹೆದ್ದಾರಿ 207 ಡಾಂಬರೀಕರಣವನ್ನು ಒಂದು ವಾರದಲ್ಲಿ ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಕರೆಸಿ ಮಾತುಕತೆ ಮಾಡಲಾಗಿದ್ದು ಅವರು ಸಹ ಒಪ್ಪಿಗೆ ನೀಡಿದ್ದಾರೆ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದರು.ಪಟ್ಟಣದ ಪ್ರವಾಸಿಮಂದಿರದಲ್ಲಿ 3 ಇಲಾಖೆ ಅಧಿಕಾರಿಗಳನ್ನು ಕರೆಸಿ ಮಾತುಕತೆ ನಡೆಸಿ ಅವರು ಮಾತನಾಡಿದರು. ಕಳೆದ 2 ವರ್ಷಗಳಿಂದ ಸರಕಾರ ರಸ್ತೆ ಹಾಗು ಕಾಮಗಾರಿಗಳ ನಿರ್ವಹಣೆಗೆ ಹಣಬಿಡುಗಡೆ ಮಾಡುತ್ತಿಲ್ಲೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರಿಗೆ ಮನವರಿಕೆ ಮಾಡಿಕೊಟ್ಟು ತುರ್ತಾಗಿ ದೇವನಹಳ್ಳಿ ಪಟ್ಟಣದಲ್ಲಿ ಹಾದುಹೋಗುವ ಎಲ್ಲಾ ರಸ್ತೆಗಳಲ್ಲಿ ಬೃಹದಾಕಾರದ ಗುಂಡಿಗಳು ಬಿದ್ದಿದಿರುವುದರಿಂದ ಪ್ರನಿನಿತ್ಯ ಅನೇಕ ಬಿದ್ದು ಕೈಕಾಲು ಮುರಿದುಕೊಳ್ಳುತ್ತಿದ್ದಾರೆ. ಹಾಗು ಅನೇಕರು ನನಗೆ ಪ್ರತಿನಿತ್ಯ ಕರೆ ಮಾಡಿ ಹೆದ್ದಾರಿ ಸರಿಪಡಿಸುವಂತೆ ಒತ್ತಡವು ಸಹ ಹೇರುತ್ತಿದ್ದಾರೆ .

CHETAN KENDULI

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪಟ್ಟಣದಲ್ಲಿ ಹಾದುಹೋಗುವ ರಸ್ತೆಗಳನ್ನು ಹೊರತುಪಡಿಸಿ ಹೊರಬಾಗದ ರಸ್ತೆಗಳನ್ನು ನಿರ್ವಹಣೆ ಮಾಡುತ್ತಿದ್ದಾರೆ ಪಟ್ಟಣ ವ್ಯಾಪ್ತಿಯಲ್ಲಿ ಪುರಸಭೆ ಅಥವ ಲೋಕೋಪಯೋಗಿ ಇಲಾಖೆ ನಿರ್ವಹಣೆ ಮಾಡಬೇಕು ಎನ್ನುವುದು ಹೆದ್ದಾರಿ ಪ್ರಾಧಿಕಾರದ 3 ಇಲಾಖೆಯ ಅಧಿಕಾರಿಗಳನ್ನು ಕರೆಸಿ ಚರ್ಚಿಸಿ ಪುರಸಭೆ ಹಾಗು ಲೋಕೋಪಯೋಗಿ ಇಲಾಖೆಯಲ್ಲಿ ಹಣವಿಲ್ಲದ ಕಾರಣ ಹಾಗು ರಾಷ್ಟೀಯ ಹೆದ್ದಾರಿ ಪಟ್ಟಣದ ಮಧ್ಯಭಾಗದಲ್ಲೇ ಹಾಗುಹೋಗಿರುವುದರಿಂದ ಹೆದ್ದಾರಿ ಪ್ರಾಧಿಕಾರದವರ ನಿರ್ವಹಣೆ ಮಾಡುವಂತೆ ತಿಳಿಸಲಾಗಿದ್ದು . ಒಂದು ವಾರ ಗಡುವು ಕೇಳಿದ್ದು ಮಳೆ ನಿಂತ ತಕ್ಷಣ ಡಾಂಬರೀಕರಣ ಮಾಡುವುದಾಗಿ ತಿಳಿಸಿದ್ದಾರೆ. ಡಾಂಬರೀಕರಣವಾದರೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದರು.ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರದ ಪ್ರಾಜಕ್ಟ್ ಡೈರೆಕ್ಟರ್ ಪಾರ್ವತೀಶಂ ಮಾತನಾಡಿ, ಶಾಸಕರು ಪಟ್ಟಣದಲ್ಲಿ ಹಾದುಹೋಗಿರುವ 207 ರಸ್ತೆಗಳನ್ನು ನೂತನವಾಗಿ ಡಾಂಬರೀಕರಣ ಮಾಡುವಂತೆ ಮನವಿ ಸಲ್ಲಿಸಿದ್ದಾರೆ ಅವರ ಮನವಿಯನ್ನು ಕೇಂದ್ರ ಕಛೇರಿಗೆ ಸಲ್ಲಿಸಿ ಅನುಮತಿ ಪಡೆದು ಒಂದು ವಾರದಲ್ಲಿ ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಗೆ ನೂತನವಾಗಿ ಡಾಂಬರೀಕರಣ ಮಾಡಲಾಗುವುದು ಎಂದರು. ಈ ವೇಳೆಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಮುನೇಗೌಡ, ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ಲೋಕೋಪಯೋಗಿ ಇಲಾಖೆ ಎಇಇ ಕೃಷ್ಣಪ್ಪ, ಪುರಸಭೆ ಮುಖ್ಯಾಧಿಕಾರಿ ಎ.ಎಚ್.ನಾಗರಾಜ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಇದ್ದರು. 

Be the first to comment

Leave a Reply

Your email address will not be published.


*