ಜಿಲ್ಲಾ ಸುದ್ದಿಗಳು
ಬಾಗಲಕೋಟೆ : ಕೊರೊನಾ ಮಾರ್ಗಸೂಚಿ ಪಾಲಿಸುವ ಮೂಲಕ ನವೆಂಬರ 1 ರಂದು ಆಚರಿಸಲ್ಪಡುವ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಜೊತೆಗೆ ವಿವಿಧ ಇಲಾಖೆಯ ಸ್ತಬ್ದಚಿತ್ರ ಪ್ರದರ್ಶನ ಹಾಗೂ ಲಘು ಸಾಂಸ್ಕøತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಕನ್ನಡ ರಾಜ್ಯೋತ್ಸ ಆಚರಣೆ ಕುರಿತ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಂದು ಬೆಳಿಗ್ಗೆ 9 ಗಂಟೆಗೆ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ. ಕಾರ್ಯಕ್ರಮ ಸಿದ್ದತೆಗೆ 10 ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಸಮಿತಿಯವರಿಗೆ ವಹಿಸಿದ ಕೆಲಸವನ್ನು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಲು ಸೂಚಿಸಿದರು.
ಪೊಲೀಸ್ ಪರೇಡ್, ಶಾಲಾ ಮಕ್ಕಳಿಂದ ಲಘು ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ಸ್ತಬ್ದಚಿತ್ರ ಪ್ರದರ್ಶನ ಸಹ ಹಮ್ಮಿಕೊಳ್ಳಲಾಗುತ್ತಿದ್ದು, ಯಾವುದೇ ರೀತಿಯ ಮೆರವಣಿಗೆ ಇರುವದಿಲ್ಲವೆಂದು ತಿಳಿಸಿದರು. ಧ್ವಜಾರೋಹಣ ವ್ಯವಸ್ಥೆ ಮಾಡಲು ಭಾರತ ಸೇವಾದಳ, ಪೋಲಿಸ್ ಇಲಾಖೆ, ತಹಶೀಲ್ದಾರ ಹಾಗೂ ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಗೆ ವಹಿಸಲಾಯಿತು. ಕಾರ್ಯಕ್ರಮದಲ್ಲಿ ನಾಡಗೀತೆ ಹಾಗೂ ಕುವೆಂಪು ವಿರಚಿತ ನೇಗಿಲಯೋಗಿ ಗೀತೆಯನ್ನು ಹಾಡಿಸುವ ವ್ಯವಸ್ಥೆಯನ್ನು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಲಾಯಿತು.
ಜಿಲ್ಲಾ ಕ್ರೀಡಾಂಗಣದ ಸ್ವಚ್ಛತೆ, ಶುದ್ದ ಕುಡಿಯುವ ನೀರು, ವೇದಿಕೆ, ವಿದ್ಯುತ್, ಧ್ವನಿವರ್ಧಗಳ ಹಾಗೂ ಜನರೇಟರ, ಆಸನಗಳ ವ್ಯವಸ್ಥೆಗಳ ಜೊತೆಗೆ ಪೋಲಿಸ್ ಬಂದೋಬಸ್ತ ವ್ಯವಸ್ಥೆ ಮಾಡುವಂತೆ ಪೋಲಿಸ್ ಇಲಾಖೆಗೆ ಸೂಚಿಸಿದರು. ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಮಾಸ್ಕ್ ಕಡ್ಡಾವಾಗಿ ಧರಿಸುವ ಮೂಲಕ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಶಿಷ್ಟಾಚಾರಕ್ಕೆ ಲೋಪವಾಗದಂತೆ ಧ್ವಜ ಸಂಹಿತೆಗೆ ಯಾವುದೇ ತರಹ ಅಪಚಾರವಾಗದಂತೆ ನೋಡಿಕೊಳ್ಳಲು ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಶಿಧರ ಪೂಜಾರ, ಆರ್‍ಎಂಎಸ್‍ನ ಯೋಜನಾ ಸಮನ್ವಯಾಧಿಕಾರಿ ಜಾಸ್ಮೀನ್ ಕಿಲ್ಲೇದಾರ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಹುಲ್‍ಕುಮಾರ ಬಾವಿದಡ್ಡಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ಎನ್.ಹೇಮಾವತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರರು, ಗೃಹರಕ್ಷಕÀ, ಭಾರತ ಸೇವಾದಳ ಮತ್ತು ಕನ್ನಡಪರ ಸಂಘಟನೆ ಮುಖಂಡರು ಉಪಸ್ಥಿತರಿದ್ದರು.
Be the first to comment