ರಾಮಾಯಣವು ಭಾರತೀಯರ ಜೀವನ ಚರಿತ್ರೆ ಮತ್ತು ಸಂಸ್ಕೃತಿಯ ಪ್ರತಿಬಿಂಬವಾಗಿದೆ

ವರದಿ: ಹೈದರ್ ಸಾಬ್, ಕುಂದಾಣ

ರಾಜ್ಯ ಸುದ್ದಿಗಳು 

ದೇವನಹಳ್ಳಿ

ರಾಮಾಯಣವು ಭಾರತೀಯರ ಜೀವನ ಚರಿತ್ರೆಯನ್ನು ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ. ಮಹರ್ಷಿ ವಾಲ್ಮಿಕಿಯು ರಾಮಾಯಣದಲ್ಲಿ ಭರತ ಖಂಡದಲ್ಲಿನ ಅರಣ್ಯಗಳು, ಪರ್ವತಗಳು, ನದಿಗಳು, ಸರೋವರಗಳು, ಸಮುದ್ರಗಳು ಮತ್ತು ಜಲಪಾತಗಳ ಪ್ರಕೃತಿ ಸೌಂದರ್ಯವನ್ನು ವರ್ಣಿಸಿರುವ ಆದಿಕವಿಯಾಗಿದ್ದಾರೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ವಿಜಯ್‌ಕುಮಾರ್ ತಿಳಿಸಿದರು.

CHETAN KENDULO

ದೇವನಹಳ್ಳಿ ತಾಲೂಕಿನ ಅರದೇಶನಹಳ್ಳಿ ಗ್ರಾಮದಲ್ಲಿರುವ ಮಹರ್ಷಿ ವಾಲ್ಮೀಕಿ ವೃತ್ತದಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ಭಾರತದ ಮೊಟ್ಟಮೊದಲ ಮಹಾಕಾವ್ಯ ರಾಮಾಯಣವನ್ನು ರಚಿಸಿದ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವವನ್ನು ಅ.೨೦ರಂದು ಕರ್ನಾಟಕ ರಾಜ್ಯಾದ್ಯಂತ ಆಚರಿಸುತ್ತಿರುವುದು ಅತ್ಯಂತ ಅರ್ಥಪೂರ್ಣ ಸಂಗತಿಯಾಗಿದೆ. ವಿವಿಧ ಪಾತ್ರಗಳ ಮುಖಾಂತರ ಕೌಟುಂಬಿಕ ಮೌಲ್ಯಗಳು ಮತ್ತು ಆದರ್ಶ ವ್ಯಕ್ತಿಯ ಗುಣಲಕ್ಷಣಗಳನ್ನು ಮನೋಜ್ಞವಾಗಿ ಚಿತ್ರಿಸಿದ್ದಾರೆ. ರಾಮಾಯಣ ಮಹಾಕಾವ್ಯದಲ್ಲಿ ಮಾತೃದೇವೋಭವ, ಪಿತೃದೇವೋಭವ, ಆಚಾರ್ಯ ದೇವೋಭವ, ಅಥಿತಿ ದೇವೋಭವದಂತಹ ಮೌಲ್ಯಗಳನ್ನು ಎತ್ತಿ ಹಿಡಿಯಲಾಗಿದೆ. ಮಮತೆ, ಸಮತೆ, ಭ್ರಾತೃತ್ವ, ತ್ಯಾಗ, ದೇಶಪ್ರೇಮ, ಅಳಿಲು ಸೇವೆ, ಪಿತೃವಾಕ್ಯ ಪರಿಪಾಲನೆ ಮುಂತಾದ ಹಲವಾರು ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ಪ್ರತಿಪಾದಿಸಲಾಗಿದೆ. ಇಂತಹ ಅನನ್ಯವಾದ ರಾಮಾಯಣ ಮಹಾಕಾವ್ಯವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯನ್ನು ಕವಿಗಳ ಕವಿ ಎಂದು ಮಹಾಕವಿ ಕಾಳಿದಾಸ ಗೌರವಿಸಿದ್ದಾರೆ. ಇವರ ತತ್ವ ಆದರ್ಶಗಳನ್ನು ಪ್ರತಿ ಯುವ ಪೀಳಿಗೆಗೆ ತಿಳಿಸಿಕೊಡಬೇಕು. ಅವರ ಮಾರ್ಗದರ್ಶನದಲ್ಲಿ ಪ್ರತಿಯೊಬ್ಬರು ಸಾಗಬೇಕು ಎಂದು ಹೇಳಿದರು.

ಈ ವೇಳೆಯಲ್ಲಿ ವಾಲ್ಮೀಕಿ ಸಂಘದ ಅಧ್ಯಕ್ಷ ಹರೀಶ್, ಜಾಲಿಗೆ ಗ್ರಾಪಂ ಸದಸ್ಯ ಸಿ.ಎಂ.ಆನಂದ್, ಎಸ್‌ಡಿಎಂಸಿ ಅಧ್ಯಕ್ಷ ಧನಂಜಯ್, ಯುವ ಕಾಂಗ್ರೆಸ್‌ನ ಮನು, ಮೋಹನ್‌ಬಾಬು, ಜಗದೀಶ್, ಗ್ರಾಮದ ಹಿರಿಯರಾದ ಬಾಲಚಂದ್ರ, ಮಂಜುನಾಥ್ ಹಾಗೂ ಊರಿನ ಮುಖಂಡರು ಇದ್ದರು. 

Be the first to comment

Leave a Reply

Your email address will not be published.


*